ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ: ಉಪನ್ಯಾಸಕಿ, ವಾಗ್ಮಿ ನಾಗಶ್ರೀ ತ್ಯಾಗರಾಜ್ಕೌಟಂಬಿಕ ಹಿಂಸಾಚಾರ, ಮಹಿಳೆಯರ ವಿರುದ್ಧದ ತಾರತಮ್ಯ ಹಾಗೂ ಪಕ್ಷಪಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಉಪನ್ಯಾಸಕಿ ಹಾಗೂ ವಾಗ್ಮಿ ನಾಗಶ್ರೀ ತ್ಯಾಗರಾಜ್ ಕಳವಳ ವ್ಯಕ್ತಪಡಿಸಿದರು. ಬೇಲೂರಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ, ಮಹಿಳಾ ಸಬಲೀಕರಣ ಕುರಿತು ಉಪನ್ಯಾಸ ಹಾಗೂ ಸರಸ್ವತಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.