• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಗಳ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ
ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳಲ್ಲಿನ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಹಲವು ಸಮಸ್ಯೆಗಳನ್ನು ಪರಿಹರಿಸಬೇಕು. ಒಂದು ವೇಳೆ ಸರ್ಕಾರ ಈ ಸಮಸ್ಯೆಗಳ ಗಂಭೀರತೆಯನ್ನು ಪರಿಗಣಿಸದೆ ಹೋದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಶುಕ್ರವಾರ ಎಬಿವಿಪಿ ಸಂಘಟನೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ವ್ಯಾಪಕ ಕೊರತೆ ಇರುವುದು. ಇದರ ಪರಿಣಾಮ ವಿದ್ಯಾರ್ಥಿಗಳಿಗೆ ಸಮರ್ಪಕ ತರಗತಿ ನಡೆಯದಿರುವುದು ಕಳೆದ ಹಲವಾರು ವರ್ಷಗಳಿಂದ ಇರುವ ಗಂಭೀರ ಸಮಸ್ಯೆಯಾಗಿದೆ ಎಂದರು.
ಅರಕಲಗೂಡು ದಸರಾಗೆ ಶಾಸಕ ಮಂಜು ಚಾಲನೆ
ಗ್ರಾಮದೇವತೆ ದೊಡ್ಡಮ್ಮ ದೇವಾಲಯದ ಆವರಣದಲ್ಲಿ ಗುರುವಾರ ಸಂಜೆ ಅರಕಲಗೂಡು ದಸರಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಟ್ಟಣದಲ್ಲಿ ಬಹಳ ಹಿಂದಿನಿಂದಲೂ ದಸರಾ ಉತ್ಸವ ನಡೆದು ಬಂದಿತ್ತು. ಕಾರಣಾಂತರಿಂದ ಕೆಲಕಾಲ ಸ್ಥಗಿತಗೊಂಡಿದ್ದ ಇದಕ್ಕೆ, 24 ವರ್ಷಗಳ ಹಿಂದೆ ಮರುಚಾಲನೆ ನೀಡಿ ವೈಭವದಿಂದ ನಡೆಸಿಕೊಂಡು ಬರುತ್ತಿದ್ದು ರಾಜ್ಯದಾದ್ಯಂತ ಗಮನ ಸೆಳೆದಿದೆ ಎಂದರು. ಪಟ್ಟಣದಲ್ಲಿ ವೈಭವದಿಂದ ನಡೆಯುತ್ತಿರುವ ದಸರಾ ಉತ್ಸವ ತಾಲೂಕಿನ ಸಾಂಸ್ಕೃತಿಕ ಹೆಮ್ಮೆಯಾಗಿದೆ ಎಂದು ಶಾಸಕ ಎ. ಮಂಜು ತಿಳಿಸಿದರು.
ದೇವಾಲಯಗಳ ಅಭಿವೃದ್ಧಿ ಕಾಮಗಾರಿಗೆ ಒತ್ತು
ಶೌಚಾಲಯ ನಿರ್ಮಾಣ ನಗರ ವ್ಯಾಪ್ತಿಯಲ್ಲಿ ನಾಮಫಲಕ ಅಳವಡಿಕೆ, ಸಿಸಿ ರಸ್ತೆಗಳ ನಿರ್ಮಾಣ ಐ ಮಾಸ್ಕ್‌ ದೀಪ ಹಾಗೂ ಬೀದಿ ದೀಪಗಳ ಅಳವಡಿಕೆ ಸಿಸಿ ರಸ್ತೆಗಳ ನಿರ್ಮಾಣ ನಗರಸಭೆ ಆವರಣದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪನೆ ಸೇರಿದಂತೆ 99 ವಿಷಯಗಳನ್ನು ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಯಿತು. ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನಗರಸಭಾ ವ್ಯಾಪ್ತಿಯಲ್ಲಿ ವಸತಿಯ ನಿಲಯಗಳಲ್ಲಿರುವ ಕುಡಿಯುವ ನೀರಿನ ಸಂಪರ್ಕಗಳನ್ನು ಸಕ್ರಮಗೊಳಿಸಲಾಗುವುದು ಎಂದು ತಿಳಿಸಿದರು.
ಲೋಕಾಯುಕ್ತ ಎಡಿಜಿಪಿ ವಜಾಕ್ಕೆ ಜೆಡಿಎಸ್‌ ಕಾರ್ಯಕರ್ತರ ಆಗ್ರಹ
ಕರ್ನಾಟಕಕ್ಕೆ ಎಚ್.ಡಿ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದರೆ ಪ್ರಸಕ್ತ ಕೇಂದ್ರ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಧ್ಯೇಯದಂತೆ ಕೆಲಸ ಮಾಡುತ್ತಿದ್ದಾರೆ. ಆದರೆ ವಿನಾಕಾರಣ ಐಪಿಎಸ್ ಅಧಿಕಾರಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕೇಂದ್ರ ಸಚಿವರನ್ನು ನಿಂದಿಸಿದ್ದಾರೆ. ಆದ್ದರಿಂದ ಇವರನ್ನು ರಾಜ್ಯದ ಪೊಲೀಸ್ ಸೇವೆಯಿಂದ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ಉಪವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಸ್ವಚ್ಛ ಪರಿಸರದಿಂದ ರೋಗಗಳು ಹರಡುವುದಿಲ್ಲ
ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿ ಇಟ್ಟುಕೊಂಡರೆ ಯಾವ ಮನುಷ್ಯರಿಗೂ ಕೂಡ ಯಾವುದೇ ರೋಗರುಜಿನಗಳು ಹರಡುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕೂಡ ತಮ್ಮ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿ ಇಟ್ಟುಕೊಳ್ಳುವ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು. ಈಗಾಗಲೇ ನಾವು ಕೂಡ ನಮ್ಮ ಸರ್ಕಾರಿ ಆಸ್ಪತ್ರೆಯ ಆವರಣದ ಸುತ್ತಮುತ್ತ ಯಾವುದೇ ವ್ಯಕ್ತಿಯ ಕಸ, ಕಡ್ಡಿಗಳನ್ನು ಹಾಕದೆ ಶುಚಿತ್ವದ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೇವೆ ಎಂದು ವೈದ್ಯಾಧಿಕಾರಿ ಡಾ. ವಿ.ಮಹೇಶ್ ತಿಳಿಸಿದ್ದಾರೆ.
ಪುಷ್ಪಗಿರಿ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ
ಪ್ರೀತಿ, ವಿಶ್ವಾಸ ಮತ್ತು ಅನ್ಯೋನ್ಯತೆಯಿಂದ ಎಲ್ಲರೂ ಒಗ್ಗಟ್ಟಿನಿಂದ ನಡೆದರೆ ಮಾತ್ರ ಎಲ್ಲಾ ಧಾರ್ಮಿಕ ಕಾರ್ಯಗಳನ್ನು ಯಶಸ್ವಿಯಾಗಿಸಲು ಸಾಧ್ಯ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್. ಕೆ ಸುರೇಶ್ ತಿಳಿಸಿದರು. ಹಳೆಬೀಡಿನಲ್ಲಿ ಪುಷ್ಪಗಿರಿ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸರ್ಕಾರಿ ನೌಕರರಲ್ಲಿ ದಕ್ಷತೆ, ಪ್ರಾಮಾಣಿಕತೆ ಇರಲಿ
ಆಲೂರು: ಸರ್ಕಾರಿ ನೌಕರರು ದಕ್ಷತೆ, ಪ್ರಾಮಾಣಿಕತೆ, ವಿಧೇಯತೆ ಮತ್ತು ವಿನಯತೆಯಿಂದ ಜನಸಾಮಾನ್ಯರ ಕೆಲಸ ಮಾಡಬೇಕು ಎಂದು ತಹಸೀಲ್ದಾರ್‌ ನಂದಕುಮಾರ್‌ ತಿಳಿಸಿದರು.
ಶರನ್ನವರಾತ್ರಿ ಪೂಜಾ ಮಹೋತ್ಸವ ಪ್ರಯುಕ್ತ ವಿಶೇಷ ಪೂಜೆ
ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದೇವಾಂಗ ಬಡಾವಣೆಯ ಶ್ರೀ ಚೌಡೇಶ್ವರಿ ಹಾಗೂ ಶ್ರೀ ಬನಶಂಕರಿ ದೇವಿ ದೇವಾಲಯಗಳಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ ಪ್ರಯುಕ್ತ ಪ್ರತಿದಿನ ಸಂಜೆ ವಿಶೇಷ ಪೂಜೆ ವಿಜೃಂಭಣೆಯಿಂದ ನಡೆಯಲಿದೆ.
ಹೃದಯಾಘಾತದಿಂದ ಜೀವವಿಮಾ ಪ್ರತಿನಿಧಿ ದ್ವಾರಕೀಶ್‌ ನಿಧನ
ಸದಾಕಾಲ ಚೈತನ್ಯದಿಂದ ಇರುತ್ತಿದ್ದ ಆರೋಗ್ಯ ಹಾಗೂ ಜೀವ ವಿಮಾ ಸಲಹೆಗಾರರಾದ ದ್ವಾರಕೀಶ್ ಅವರು ಚನ್ನರಾಯಪಟ್ಟಣದ ಅವರ ಮನೆಯಲ್ಲಿ ಸೋಮವಾರ ರಾತ್ರಿ ಹೃದಯಾಘಾತಕ್ಕೆ ಒಳಗಾಗಿದ್ದರು, ತಕ್ಷಣವೇ ಅವರನ್ನು ಪಟ್ಟಣದ ನಾಗೇಶ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹಾಸನದ ಸ್ಪರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತರಾಗಿದ್ದಾರೆ. ಅವರ ಪೂರ್ವ ನಿರ್ಧಾರದಂತೆ ಕುಟುಂಬದ ಸದಸ್ಯರು ಆದಿಚುಂಚನಗಿರಿ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ದೇಹವನ್ನು ದಾನ ಮಾಡಿದ್ದಾರೆ.
ಅಹಿಂಸೆ ಮೂಲಕ ಬದುಕಬಹುದೆಂದು ತೋರಿಸಿದವರು ಗಾಂಧೀಜಿ
ಅಸಾಮಾನ್ಯ ಎಂದೆನಿಸಿರುವ ಸತ್ಯ, ಅಹಿಂಸೆ ಮತ್ತು ಸರಳತೆ ಮಾರ್ಗದಲ್ಲಿ ಬದುಕಲು ಸಾಧ್ಯವೆಂದು ತೋರಿಸಿ, ತನ್ಮೂಲಕ ಜೀವನದ ಅತ್ಯುನ್ನತ ಆದರ್ಶಗಳ ಸಂದೇಶವನ್ನು ಇಡೀ ವಿಶ್ವಕ್ಕೆ ನೀಡಿದವರು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಎಂದು ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ಪ್ರಾಂಶುಪಾಲರಾದ ಕುಮಾರ್ ತಿಳಿಸಿದರು.
  • < previous
  • 1
  • ...
  • 321
  • 322
  • 323
  • 324
  • 325
  • 326
  • 327
  • 328
  • 329
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved