• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ಆವರಣ ಕೃಷಿ ಭೂಮಿ ಮಾಡಿದ ಬಸವರಾಜ್
ಕಾಳನಕೊಪ್ಪಲು ಶಾಲಾ ಆವರಣದಲ್ಲಿ ಮಕ್ಕಳ ಕ್ರೀಡಾ ಚಟುವಟಿಕೆಗೆ ಮೈದಾನವನ್ನು ಹೊರತುಪಡಿಸಿ ಬದಿಯಲ್ಲಿ ಕೃಷಿ ಭೂಮಿಯಂತೆ ಶಿಕ್ಷಕರೊಬ್ಬರು ನಿರ್ಮಾಣ ಮಾಡಿದ್ದಾರೆ. ಶಾಲೆಗೆ ಇಲಾಖೆ ನಿಗದಿತ ವೇಳೆಗಿಂತ ಮೊದಲು ಮತ್ತು ನಂತರ ತೆರಳುವ ಇವರು ಮಕ್ಕಳಿಗೆ ಕೃಷಿ ಎಂದರೇನು, ರೈತರು ತರಕಾರಿಯನ್ನು ಹೇಗೆ ಬೆಳೆಯುತ್ತಾರೆ, ಅವುಗಳ ಪೋಷಣೆ ಮಣ್ಣಿನಲ್ಲಿ ಇರುವ ಪೋಷಕಾಂಶಗಳೇನು, ಮತ್ತು ಗಿಡಗಳ ನಿರ್ವಹಣೆ ಮತ್ತು ಸಂರಕ್ಷಣೆ ಹೇಗೆ, ಎಂಬ ಬಗ್ಗೆ ಮಕ್ಕಳಲ್ಲಿ ಜ್ಞಾನವನ್ನು ತುಂಬುವ ಪ್ರಯತ್ನವನ್ನು ಬಸವರಾಜ್ ಮಾಡಿದ್ದಾರೆ.
ಗುಡ್ಡಗಳನ್ನು ಸರಿಯಾಗಿ ಕಡಿದಿರುವುದೇ ಕುಸಿತಕ್ಕೆ ಪ್ರಮುಖ ಕಾರಣ
ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೊಡ್ಡ ತಪ್ಪಲೆ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಕಳೆದ ಹಲವು ದಿನಗಳಿಂದ ಗುಡ್ಡ ಕುಸಿಯುತ್ತಿದ್ದು, ಪರಿಸ್ಥಿತಿಯ ಗಂಭೀರತೆ ಅರಿತು ಶನಿವಾರ ಭೇಟಿ ನೀಡಿ ಭೂ ಕುಸಿತವಾಗಿರುವುದನ್ನು ವೀಕ್ಷಣೆ ಮಾಡಿ ಪರಿಶೀಲನೆ ಮಾಡಿದರು. ರಾಷ್ಟ್ರೀಯ ಹೆದ್ದಾರಿ ೭೫ರ ಚತುಷ್ಪಥ ರಸ್ತೆ ಅಗಲೀಕರಣಕ್ಕಾಗಿ ಶಿರಾಡಿಯ ದೊಡ್ಡತಪ್ಪಲೆ ಬಳಿ ಗುಡ್ಡಗಳನ್ನು ೯೦ ಡಿಗ್ರಿಯಲ್ಲಿ ಕಡಿದಾಗಿ ಸೀಳಿರುವುದು ಗುಡ್ಡ ಕುಸಿತಕ್ಕೆ ಇರುವ ಪ್ರಮುಖ ಕಾರಣಗಳಲ್ಲಿ ಒಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಯಾಗಿಸಲು ಕರೆ
ಆಲೂರು ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ನಡೆಯಿತು. ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಗಸ್ಟ್ 15ರಂದು ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದ್ದು ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳು ಹಾಗೂ ಕನ್ನಡಪರ ಸಂಘಟನೆಗಳು ಕೈಜೋಡಿಸಿ ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸುವಂತೆ ತಹಸೀಲ್ದಾರ್‌ ಸಿ. ಪಿ.ನಂದಕುಮಾರ್‌ ಸೂಚಿಸಿದರು.
ವಿಷ್ಣುಸಮುದ್ರ ಕೆರೆಗೆ ಶಾಸಕ ಸುರೇಶ್‌ ಬಾಗಿನ
ಇತಿಹಾಸ ಪ್ರಸಿದ್ಧ ವಿಷ್ಣುಸಮುದ್ರ ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ ಶಾಸಕ ಎಚ್.ಕೆ. ಸುರೇಶ್ ಶುಕ್ರವಾರ ಪೂಜೆ ಸಲ್ಲಿಸಿ ಬಾಗಿನ ಸಮರ್ಪಿಸಿದರು. ಕೆರೆಯ ಸುತ್ತಮುತ್ತಲ ಪರಿಸರವನ್ನು ಸ್ವಚ್ಛಗೊಳಿಸಿ ಪ್ರವಾಸಿಗರು ಕೆರೆ ವೀಕ್ಷಣೆಗೆ ಬರುತ್ತಿದ್ದು ಇದನ್ನು ಅಭಿವೃದ್ಧಿಗೊಳಿಸಲು ವಿಷ್ಣುಸಮುದ್ರ ಮತ್ತು ನಗರದಲ್ಲಿರುವ ಕಳಸಿನಕೆರೆ ಹಳೇಬೀಡಿನ ದ್ವಾರಸಮುದ್ರ ಕೆರೆಯನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಿ ಹಂತ ಹಂತವಾಗಿ ಕೆರೆಯನ್ನು ಅಭಿವೃದ್ಧಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಸದ್ಯದಲ್ಲಿಯೇ ಕೆರೆಯ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.
ದಾಖಲಾತಿ ಹೆಚ್ಚಿಸದಿದ್ದರೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗಳನ್ನು ಹೆಚ್ಚಿಸದೇ ಹೋದಲ್ಲಿ, ಮುಂದಿನ ದಿನಗಳಲ್ಲಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿ ಶಿಕ್ಷಕರ ನೇಮಕಾತಿ ನಿಲ್ಲಿಸುವ ಸಾಧ್ಯತೆಯೂ ಹೆಚ್ಚಿದೆ ಎಂದು ಶಿಕ್ಷಣ ಇಲಾಖೆ ಜಿಲ್ಲಾ ನಿರ್ದೇಶಕ ಎಚ್.ಕೆ. ಪಾಂಡು ಸಲಹೆ ನೀಡಿದರು. ಹೊಳೆನರಸೀಪುರ ಪಟ್ಟಣದ ಶಿಕ್ಷಕರ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾ. ಘಟಕ ಆಯೋಜನೆ ಮಾಡಿದ್ದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಧಾರಾಕಾರ ಮಳೆಯಿಂದ ಕಾಫಿ ಬೆಳೆ ನಾಶ
ಈ ಬಾರಿ ಮುಂಗಾರು ಮಳೆಯಾಗದಿರುವುದರಿಂದ ನೀರಿನ ಕೊರತೆಯ ನಡುವೆಯು ಸಾಕಷ್ಟು ಬೆಳೆಗಾರರು ಹನಿನೀರಾವರಿ ವ್ಯವಸ್ಥೆ ಮಾಡಿದ್ದರು. ಆದರೆ, ಮೇ ತಿಂಗಳಿನಲ್ಲಿ ಏಕಾಏಕಿ ಹಿಡಿದ ಮಳೆ ಮೂರು ತಿಂಗಳು ಕಳೆದರೂ ಬಿಡುವು ನೀಡದ ಪರಿಣಾಮ ಹನಿನೀರಾವರಿ ವ್ಯವಸ್ಥೆ ಮಾಡಿದ್ದ ಬಹುತೇಕ ಕಾಫಿ ತೋಟದಲ್ಲಿ ಶೇ. ೫೦ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ರೊಬೋಸ್ಟಾ ಕಾಫಿ ನೆಲ ಸೇರಿದೆ.
ರವೀಶ್‌ ಬಸವಾಪುರ ಹುಟ್ಟುಹಬ್ಬ ಆಚರಣೆ
ಜಿಲ್ಲಾ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರವೀಶ್ ಬಸವಾಪುರ ಅವರು ಮಳೆಯಿಂದ ಮನೆ ಕಳೆದುಕೊಂಡವರಿಗೆ ಫುಡ್ ಕಿಟ್ ವಿತರಣೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಜೊತೆಗೆ ಪರಿಸರದ ಹಿತದೃಷ್ಟಿಯಿಂದ ಗಿಡ ನೆಡುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಂಡರು.
ಶಿರಾಡಿಗೆ ಭೂಗರ್ಭ ಶಾಸ್ತ್ರಜ್ಞರ ತಂಡ ಭೇಟಿ
ಭೂ ಕುಸಿತ ಸಂಭವಿಸುತ್ತಿರುವ ತಾಲೂಕಿನ ದೊಡ್ಡತಪ್ಪಲೆ ಹಾಗೂ ಇನ್ನಿತರೆ ಸ್ಥಳಗಳಿಗೆ ಶುಕ್ರವಾರ ಭೂಗರ್ಭ ಶಾಸ್ತ್ರಜ್ಞರ ತಂಡ ಭೇಟಿ ನೀಡಿತ್ತು. ಅಲ್ಲಿನ ಮಣ್ಣು ಮತ್ತು ಕಲ್ಲಿನ ಮಾದರಿಗಳನ್ನು ಸಂಗ್ರಹಿಸಿ ಕೊಂಡೊಯ್ಯಲಾಗಿದೆ. ಅತಿಯಾದ ಮಳೆಯಿಂದಾಗಿ ಭೂಮಿಯ ಪದರಗಳ ಒಳಗೆ ನೀರು ಸೇರಿಕೊಂಡು ಭೂ ಕುಸಿತ ಆಗುತ್ತಿದೆ. ಹಾಗೆಯೇ ರಸ್ತೆ ಅಗಲೀಕರಣಕ್ಕಾಗಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಯಂತ್ರಗಳಿಂದ ಕತ್ತರಿಸುತ್ತಿರುವುದು ಭೂ ಕುಸಿತಕ್ಕೆ ಮೇಲ್ನೋಟದ ಕಾರಣಗಳಾಗಿವೆ ಎಂದು ತಂಡ ಅಭಿಪ್ರಾಯ ವ್ಯಕ್ತಪಡಿಸಿದೆ.
ನದಿ ದಡದ ಸಂತ್ರಸ್ತರಿಗೆ ಶಾಶ್ವತ ಪರಿಹಾರದ ಅಗತ್ಯವಿದೆ
ಕಾವೇರಿ ನದಿ ದಂಡೆ ಮೇಲೆ ನೆಲೆಸಿರುವ ಇಲ್ಲಿನ ನಿವಾಸಿಗಳು ಪ್ರವಾಹ ಸಂದರ್ಭದಲ್ಲಿ ಪ್ರತಿವರ್ಷ ನೆರೆ ಭೀತಿ ಅನುಭವಿಸುತ್ತಿದ್ದಾರೆ. ಪ್ರವಾಹ ತಲೆದೋರಿದರೆ ತಾತ್ಕಾಲಿಕವಾಗಿ ಗಂಜಿ ಕೇಂದ್ರ ತೆರೆದು ಸಂತ್ರಸ್ಥರನ್ನು ಸಂತೈಸಲಾಗುತ್ತಿದೆ ಹೊರತು ಇವರಿಗೆ ಶಾಶ್ವತ ಪರಿಹಾರ ದೊರಕಿಸಲು ಸಾಧ್ಯವಾಗಿಲ್ಲ. ನದಿ ದಡದ ಸಂತ್ರಸ್ತರಿಗೆ ಶಾಶ್ವತ ಪರಿಹಾರದ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ. ಶ್ರೀಧರ್‌ ಗೌಡ ಆಗ್ರಹಿಸಿದರು.
ರಾಜಣ್ಣ ಉಸ್ತುವಾರಿ ಸಚಿವರೋ ಅಥವಾ ಅತಿಥಿಯೋ
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿ ಸಂಭವಿಸಿದೆ. ಸಕಲೇಶಪುರದಲ್ಲಿ ಶೇ.60 ಕಾಫಿ ಬೆಳೆ ಅತಿಯಾದ ಮಳೆಗೆ ಕೊಳೆತು ಹಾಳಾಗಿದೆ. ಕಾಳು ಮೆಣಸಿನ ಕತೆಯೂ ಇದೆ. ಆಗಿದೆ. ಶಿರಾಡಿಘಾಟ್‌ನಲ್ಲಿ ಪದೇ ಪದೆ ಭೂ ಕುಸಿತ ಸಂಭವಿಸಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹತ್ತಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ನೂರಾರು ಎಕರೆ ಬೆಳೆ ಇದ್ದ ಪ್ರದೇಶ ಹುಚ್ಚು ಮಳೆಗೆ ಕೊಚ್ಚಿ ಹೋಗಿದೆ. ರಸ್ತೆ ಸಂಪರ್ಕ ಕಡಿತಗೊಂಡು ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿದ್ದರೂ ಉಸ್ತುವಾರಿ ಸಚಿವರಾದ ರಾಜಣ್ಣ ಸಚಿವರು ಜಿಲ್ಲೆಗೆ ಬರುತ್ತಿಲ್ಲ ಏಕೆ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved