ಅನಿರ್ದಿಷ್ಟಾವಧಿಗೆ ಮತ್ತೆ ಶಿರಾಡಿ ಬಂದ್ ರಾಷ್ಟ್ರೀಯ ಹೆದ್ದಾರಿ ೭೫ರ ದೊಡ್ಡತಪ್ಪಲೆ ಗ್ರಾಮದ ಸಮೀಪ ಮತ್ತೆ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್, ಟಿಪ್ಪರ್, ಎರಡು ಕಾರುಗಳು ಸೇರಿದಂತೆ ಆರು ವಾಹನಗಳು ಮಣ್ಣಿನಲ್ಲಿ ಸಿಲುಕಿದ್ದು ವಾಹನದಲ್ಲಿದ್ದವರೆಲ್ಲರನ್ನು ಸುರಕ್ಷಿತವಾಗಿ ಪಾರು ಮಾಡಲಾಗಿದೆ. ಮತ್ತೆ ಅನಿರ್ದಿಷ್ಟಾವಧಿಗೆ ಶಿರಾಡಿ ಬಂದ್ ಘಾಟ್ ಸಂಚಾರ ಬಂದ್ ಮಾಡಲಾಗಿದೆ.