ಕ್ರೀಡೆಯಲ್ಲಿ ಸಾಧನೆ ಮಾಡಿ ಬದುಕು ರೂಪಿಸಿಕೊಳ್ಳಿಜ್ಞಾನ, ವಿಜ್ಞಾನ ಕಲೆ, ಸಾಹಿತ್ಯದಂತೆ ಕ್ರೀಡಾ ಕ್ಷೇತ್ರದಲ್ಲೂ ಅಪ್ರತಿಮ ಸಾಧನೆಗೈಯುವ ಮೂಲಕ ತಮ್ಮ ಬದುಕು ರೂಪಿಸಿಕೊಳ್ಳುವ ಜತೆಗೆ ಕೋಟ್ಯಂತರ ಯುವ ಕ್ರೀಡಾಪಟುಗಳಿಗೆ ಆದರ್ಶರಾಗುವ ಅವಕಾಶ ಕ್ರೀಡಾ ಕ್ಷೇತ್ರ ಕಲ್ಪಿಸಿಕೊಡುತ್ತದೆ. ಕ್ರೀಡಾಕೂಟಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಎಂದು ಹಾಸನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ ಸಲಹೆ ನೀಡಿದರು.