• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರಮಟ್ಟದ ಪ್ರಶಸ್ತಿಗಳು ನೂರರ ಗಡಿ ದಾಟಲಿ
ರಾಷ್ಟ್ರ ಪ್ರಶಸ್ತಿ ಪಡೆಯುವುದು ಅಷ್ಟು ಸುಲಭದ ಮಾತಲ್ಲ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವತಃ ರಾಷ್ಟ್ರಪತಿಗಳಿಂದಲೇ ಪ್ರಶಸ್ತಿ ಪಡೆದಿರುವುದು ಜನಮೆಚ್ಚುಗೆ ಕೆಲಸ. ಇದು ಕೇವಲ ಕಬ್ಬಳಿ ಗ್ರಾಮಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಹೆಮ್ಮೆ ತರುವ ಕೆಲಸವಾಗಿದೆ. ಬಡತನದ ಕುಟುಂಬದಲ್ಲಿ ಹುಟ್ಟಿ ಬಾಲ್ಯ ಜೀವನದಿಂದಲೇ ಕಷ್ಟದ ಬದುಕನ್ನು ಸಾಗಿಸಿ ತಮ್ಮ ಕರ್ತವ್ಯ ನಿಷ್ಠೆಯಿಂದಲೇ ಇಂದು ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಪಾತ್ರರಾಗಿರುವ ಕೆ.ಜೆ.ಶಿವಲಿಂಗಯ್ಯ ಅವರಿಗೆ, ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಗೌರವ ಸಮರ್ಪಣೆಗೆ ತಾನು ಸರ್ಕಾರಕ್ಕೆ ಒತ್ತಾಯ ಮಾಡುವುದಾಗಿ ಸಂಸದ ಶ್ರೇಯಸ್ ಪಟೇಲ್ ಭರವಸೆ ನೀಡಿದರು.
ವಿಚ್ಛೇದನ ಕೋರಿದ್ದವರನ್ನು ಒಂದುಗೂಡಿಸಿದ ಲೋಕ ಅದಾಲತ್‌
ಅರಕಲಗೂಡು ತಾಲೂಕಿನ ಸರಗೂರು ಗ್ರಾಮದ ನರಸಿಂಹಮೂರ್ತಿ ಮತ್ತು ವಿಜಯಕುಮಾರಿ ಕುಟುಂಬ ಕಲಹದಿಂದ 2020ರಲ್ಲಿ ವಿಚ್ಛೇದನ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಶನಿವಾರ ನಡೆದ ಜನತಾ ನ್ಯಾಯಾಲಯದಲ್ಲಿ ನಡೆಸಿದ ನ್ಯಾಯಾಧೀಶರಾದ ನಾಗೇಶ ಮೂರ್ತಿ ಅವರು, ದಂಪತಿ ಹಾಗೂ ಅವರ ಸಂಬಂಧಿಕರು ಮತ್ತು ವಕೀಲರೊಂದಿಗೆ ಸಮಾಲೋಚಿಸಿ ಸಂಧಾನ ನಡೆಸಿ ದಂಪತಿ ವಿಚ್ಛೇದನಕ್ಕೆ ನೀಡಿದ ಅರ್ಜಿಯನ್ನ ಹಿಂಪಡೆದು ಒಬ್ಬರಿಗೊಬ್ಬರು ಅರ್ಥಮಾಡಿಕೊಂಡು ಜೀವನ ಸಾಗಿಸುವುದಾಗಿ ಒಪ್ಪಿದ ಕಾರಣ ನ್ಯಾಯಮೂರ್ತಿಗಳು ನ್ಯಾಯಾಲಯದ ಕೊಠಡಿಯಲ್ಲೆ ಇಬ್ಬರು ದಂಪತಿಗಳು ಹಾರ ಬದಲಾಯಿಸಿಕೊಳ್ಳುವ ಮೂಲಕ ಒಂದುಗೂಡಿಸಿದರು. ಇಂತಹ ಘಟನೆ ಇಲ್ಲಿನ ನ್ಯಾಯಾಲಯದಲ್ಲಿ ಇದೇ ಮೊದಲ ಬಾರಿಗೆ ನಡೆದಿರುವುದು ಹರ್ಷದಾಯಕ ಎಂದು ವಕೀಲರು ಹರ್ಷ ವ್ಯಕ್ತಪಡಿಸಿದರು.
ಬೇಲೂರಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ
ಬೇಲೂರಿನ ಬಂಟೆನಹಳ್ಳಿಯಿಂದ ಹೊರಟ ಈದ್ ಮಿಲಾದ್ ಹಬ್ಬದ ಶೋಭಾ ಯಾತ್ರೆ, ನೆಹರು ನಗರ ಬಸವೇಶ್ವರ ವೃತ್ತ ಅಂಬೇಡ್ಕರ್ ಸರ್ಕಲ್‌ನಿಂದ ಜೆಪಿ ನಗರ ತಲುಪಿತು. ಈ ಯಾತ್ರಾ ಸಂದರ್ಭದಲ್ಲಿ ಪುಟ್ಟಪುಟ್ಟ ಮಕ್ಕಳು ಹಾಗೂ ಹಿರಿಯರು ಹೊಸ ಉಡುಪು ಧರಿಸಿ ಹಸಿರು ಧ್ವಜ ಹಿಡಿದುಕೊಂಡ ಭಕ್ತಿ ಗೀತೆ ಹಾಡಿಕೊಂಡು ಹೆಜ್ಜೆ ಹಾಕಿದರು. ವಿಶೇಷವಾಗಿ ಈ ಯಾತ್ರೆಯಲ್ಲಿ ಮೆಕ್ಕ ಮದೀನ ಸ್ತಬ್ಧ ಚಿತ್ರಗಳನ್ನು ರಸ್ತೆಯಲ್ಲಿ ನೆರೆದಿದ್ದ ಸಾರ್ವಜನಿಕರು ನೋಡಿ ಹರ್ಷ ವ್ಯಕ್ತಪಡಿಸಿದರು. ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ವ್ಹಿಪ್‌ ಉಲ್ಲಂಘಿಸಿದ ಜೆಡಿಎಸ್‌ ಸದಸ್ಯರಿಗೆ ಡೀಸಿ ನೋಟಿಸ್
ಜೆಡಿಎಸ್ ಪಕ್ಷದ ಚಿಹ್ನೆಯಡಿ ಗೆಲುವು ಸಾಧಿಸಿದ ಎಲ್ಲರೂ ಒಮ್ಮತದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಅಭ್ಯರ್ಥಿಗೆ ಮತ ಹಾಕುವಂತೆ ಸಭೆ ನಡೆಸಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್, ವಿಪ್ ಕೂಡಾ ಜಾರಿಗೊಳಿಸಿದ್ದರು. ಬಹಿರಂಗವಾಗಿಯೇ ಕಾಂಗ್ರೆಸ್ ಶಾಸಕರೊಂದಿಗೆ ಗುರುತಿಸಿಕೊಂಡಿರುವ ಸಮೀವುಲ್ಲಾ ಹಾಗೂ ಮನೋಹರ್ ಇದ್ಯಾವುದಕ್ಕೂ ಸೊಪ್ಪು ಹಾಕಿಲ್ಲ. ಇದಲ್ಲದೇ ಜೆಡಿಎಸ್‌ನಿಂದ ಉಚ್ಚಾಟಿತರಾಗಿರುವ ಸಿ.ಎಂ.ಇಬ್ರಾಹಿಂ ಬಣದ ಹೆಸರಿನಲ್ಲಿ ಉಭಯ ಸ್ಥಾನಗಳಿಗೆ ಉಮೇದುವರಿಕೆ ಸಲ್ಲಿಸಿ ಸುಜಾತಾ ರಮೇಶ್ ಸೋಲಿಗೆ ಕಾರಣರಾಗಿದ್ದರು.ಹೀಗಾಗಿ ಜೆಡಿಎಸ್ ಅಧಿಕೃತ ಅಭ್ಯರ್ಥಿ ಸುಜಾತ ರಮೇಶ್ ವಿರುದ್ಧ ಮತ ಚಲಾಯಿಸಿದ ಹದಿಮೂರು ಮಂದಿ ಹಾಗೂ ಒಬ್ಬ ಸದಸ್ಯ ಸೇರಿದಂತೆ ಹದಿನಾಲ್ಕು ಮಂದಿಗೆ ಸೆ.೨೦ರ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ನೋಟಿಸ್ ಜಾರಿಯಾಗಿದೆ.
ಗಣೇಶೋತ್ಸವದಲ್ಲಿ ಜೋಡಿ ಎತ್ತುಗಳ ಪ್ರದರ್ಶನ ಸ್ಪರ್ಧೆ
ಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ " ಎತ್ತುಗಳ ಪ್ರದರ್ಶನ " ಸಾರ್ವಜನಿಕರ ಗಮನ ಸೆಳೆಯಿತು. ಮೊದಲ ಬಾರಿಗೆ ವಿಶೇಷವಾಗಿ ಜೋಡೆತ್ತುಗಳ ಪ್ರದರ್ಶನ ಆಯೋಜನೆ ರೈತರ ಉತ್ಸಾಹವನ್ನು ಹೆಚ್ಚಿಸಿತ್ತು. ರೈತರು ಎತ್ತುಗಳನ್ನು ವಿಶೇಷವಾಗಿ ಅಲಂಕರಿಸಿದ್ದರು. ಎತ್ತುಗಳ ಕೋಡುಗಳಿಗೆ ಕೋಡಂಣ್ಸು, ಗೊಂಡೆ, ಕೊರಳಿಗೆ ಗುಗ್ಗರಿ, ಹಣೆಗೆಜ್ಜೆ, ಮೈಮೇಲೆ ಜೂಲು, ನೋಡುಗರ ಕಣ್ಣು ಎತ್ತುಗಳ ಮೇಲೆ ಬೀಳದಿರಲಿ ಎಂದು ರೈತರು ಕರಿಹಗ್ಗ ಕಟ್ಟಿದ್ದರು.
ನವ್ಕೀಸ್ ಕಾಲೇಜಿನಲ್ಲಿ ಎಂಜಿನಿಯರ್‌ಗಳ ದಿನಾಚರಣೆ
ಹಾಸನ ನಗರದ ಹೊರವಲಯದ ಕಂದಲಿ ಬಳಿ ಇರುವ ನವ್ಕೀಸ್‌ ಎಂಜನಿಯರಿಂಗ್‌ ಕಾಲೇಜಿನಲ್ಲಿ ಸೆ .15ರಂದು ಎಂಜಿನಿಯರ್‌ಗಳ ದಿನವನ್ನು ಆಚರಿಸಲಾಯಿತು. ಸರ್ ಎಮ್ ವಿಶ್ವೇಶ್ವರಯ್ಯ ನವರ ಜನ್ಮ ದಿನದ ಜ್ಞಾಪಕಾರ್ಥವಾಗಿ ಭಾರತದಾದ್ಯಂತ ರಾಷ್ಟ್ರೀಯ ಎಂಜಿನಿಯರ್ ದಿನವನ್ನು ಆಚರಿಸಲಾಗುತ್ತಿದೆ ಮತ್ತು ವಿಶ್ವೇಶ್ವರಯ್ಯನವರ ಪರಿಶ್ರಮದ ಫಲವಾಗಿ ಭಾರತದಲ್ಲಿ ಹಲವಾರು ಅಣೆಕಟ್ಟುಗಳು ನಿರ್ಮಾಣವಾಗಿದ್ದು, ಇದರಿಂದ ಕೃಷಿಗೆ ಹೆಚ್ಚು ಪ್ರಯೋಜನವಾಗಿದೆ. ಅವರು ಸ್ಥಾಪಿಸಿದ ವಿದ್ಯುತ್ ಸ್ಥಾವರಗಳಿಂದ ಇಂದು ನಾವು ವಿದ್ಯುತ್ ಪಡೆಯುತ್ತಿದ್ದೇವೆ.
ಜಿಲ್ಲೆಯಲ್ಲಿ ಮಾನವ ಸರಪಳಿ ರಚನೆ ಯಶಸ್ವಿ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಅರಕಲಗೂಡು ತಾಲೂಕಿನ ಕಡವಿನ ಹೊಸಹಳ್ಳಿಯಿಂದ ಬೇಲೂರು ತಾಲೂಕಿನ ಚೆನ್ನಾಪುರ ಗಡಿಯವರೆಗೆ ಹಮ್ಮಿಕೊಳ್ಳಲಾಗಿದ್ದ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ನಗರದ ಸಮೀಪದಲ್ಲಿರುವ ಬೇಲೂರು ರಸ್ತೆಯ ಸಿದ್ಧಾರ್ಥ ನಗರದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದಲಾಯಿತು. ಈ ವೇಳೆ ಕೈಯನ್ನು ಮುಂದೆ ಚಾಚಿ ವೇದಿಕೆ ಜೊತೆ ಸಾರ್ವಜನಿಕರು ಕೂಡ ಸಹಕರಿಸಿದರು. ಕಾರ್ಯಕ್ರಮದ ಅಂಗವಾಗಿ ಗಿಡ ನೆಡಲಾಯಿತು.
ಹೊಯ್ಸಳೇಶ್ವರ ದೇವಾಲಯದ ಆವರಣದಲ್ಲಿ ಮಾನವ ಸರಪಳಿ
ಹಳೇಬೀಡಿನ ವಿಶ್ವವಿಖ್ಯಾತ ಶ್ರೀ ಹೊಯ್ಸಳೇಶ್ವರ ದೇವಾಲಯದ ಆವರಣದಲ್ಲಿ ಭಾನುವಾರ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವನ ಸರಪಳಿಯನ್ನು ಏರ್ಪಡಿಸಲಾಗಿತ್ತು. ಕಂದಾಯ ಇಲಾಖೆಯ ಕಲ್ಪತರು ಸಮೂಹ ಮತ್ತು ಶಾರದ ವಿದ್ಯಾಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಈ ಹಿಂದೆ ರಾಜನ ಆಳ್ವಿಕೆಯನ್ನು ಏಕ ಚಕ್ರಾಧಿಪತ್ಯವನ್ನು ಒಳಗೊಂಡಿದ್ದ ವಿಶ್ವದ ಬಹುತೇಕ ದೇಶಗಳಲ್ಲಿ ಪ್ರಜಾಪ್ರಭುತ್ವದ ಪರಿಕಲ್ಪನೆಯೇ ಇರಲಿಲ್ಲ. ೧೬ನೇ ಶತಮಾನದ ಅಂತ್ಯದ ಸುಮಾರಿಗೆ ಅರಸರು ತಮ್ಮ ಬಲವನ್ನು ಕಳೆದುಕೊಳ್ಳುತ್ತ ಬಂದಂತೆ ಪ್ರಜಾಪ್ರಭುತ್ವ ಕುರಿತಾದ ಯೋಜನೆಗಳು ರಾಜಕೀಯ ತಂತ್ರಜ್ಞರು, ಜ್ಞಾನಿಗಳು ಮನದಲ್ಲಿ ರೂಪಿಸಿಕೊಳ್ಳಲಾರಂಭಿಸಿತು ಎಂದರು.
ಶಾಸಕ ಮುನಿರತ್ನರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಘೋಷಣೆ ಕೂಗುತ್ತಾ ಆಗಮಿಸಿ, ಶಾಸಕ ಮುನಿರತ್ನ ವಿರುದ್ಧ ದಿಕ್ಕಾರ ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಹಾಸನ ಜಿಲ್ಲೆಯಲ್ಲೂ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಅಪರ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ಅವರಿಗೆ ಮನವಿ ಸಲ್ಲಿಸಿದರು. ದಲಿತರ ಹಾಗೂ ಮಹಿಳೆಯರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ನಗರದ ಎಸ್ಪಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಸಂವಿಧಾನ ಪೀಠಿಕೆಯನ್ನು ಓದಿಸಿ ಕಾರ್ಯಕ್ರಮ ಯಶಸ್ವಿ
ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ನೆಹರೂ ವೃತ್ತದ ಬಳಿ ಬೃಹತ್ ಮಾನವ ಸರಪಳಿ ನಿರ್ಮಿಸಿ ನಾಡಗೀತೆ ಹಾಡಿ, ಸಂವಿಧಾನ ಪೀಠಿಕೆಯನ್ನು ಓದಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. ಇದೊಂದು ವಿಶೇಷವಾದ ದಿನ. ನಾಡಿಗೆ ಕೆಆರ್‌ಎಸ್ ಡ್ಯಾಮ್ ಕಟ್ಟುವುದರ ಮೂಲಕ ನಾಡಿಗೆ ನೀರುಣಿಸಿದ ಸರ್ ಎಂ ವಿಶ್ವೇಶ್ವರಯ್ಯ ದಿನಾಚರಣೆಯೂ ಕೂಡ ಆಗಿದ್ದು, ಎಲ್ಲರನ್ನೂ ಗೌರವಿಸುವ ಕೆಲಸ ಈ ರಾಜ್ಯ ಸರ್ಕಾರ ಮಾಡುತ್ತಾ ಇದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಸಂಘಟನೆಗಳು, ಅಧಿಕಾರಿಗಳ ವರ್ಗ, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಪ್ರಗತಿಪರರೆಲ್ಲಾ ಸೇರಿ ಈ ಕಾರ್ಯಕ್ರಮ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ ಎಂದು ಶಾಸಕ ಎಚ್ ಕೆ ಸುರೇಶ್ ಹೇಳಿದರು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved