ಬೇಡಿಕೆ ಈಡೇರಿಸದಿದ್ದರೆ ಡಿಸಿ ಕಚೇರಿ ಮುಂದೆ ಪ್ರತಿಭಟನೆ ರೈತರು ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವತಃ ವೆಚ್ಚವನ್ನು ಭರಿಸಬೇಕೆಂದು ಸರ್ಕಾರ ತೀರ್ಮಾನಿಸಿದೆ. ಈ ತೀರ್ಮಾನವು ರೈತರಿಗೆ ಹೊರೆಯಾಗಿದ್ದು, ೨ ರಿಂದ ೩ ಲಕ್ಷ ರು. ದೊಡ್ಡ ಮೊತ್ತದ ವೆಚ್ಚವನ್ನು ರೈತರು ಭರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ, ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದ್ದು, ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಡಿಸಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ. ರಘು ಎಚ್ಚರಿಸಿದರು.