27 ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನಫೆ. ೨೭ ರ ಮಂಗಳವಾರ ಸರ್ಕಾರಿ ನೌಕರರ ಮೂರು ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸುವ ಜತೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ತಾಲೂಕಿನಿಂದ ಸುಮಾರು ಒಂದು ಸಾವಿರ ಮಂದಿ ತೆರಳುತಿರುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಟಿ.ಎಸ್.ಕುಮಾರಸ್ವಾಮಿ ತಿಳಿಸಿದರು.