ಪಾಶ್ಚಿಮಾತ್ಯ ಶಿಕ್ಷಣದಿಂದ ಮಕ್ಕಳು ಜ್ಞಾನ ಪಡೆಯುತ್ತಿಲ್ಲ: ಸಿ.ಇ.ಶಂಕರ್ಭಾರತೀಯ ಸಂಸ್ಕೃತಿ, ಶಿಕ್ಷಣವನ್ನು ನೀಡದ ಕಾರಣ ಮಕ್ಕಳು ವಿದ್ಯಾವಂತರಾಗುತ್ತಿದ್ದಾರೆಯೇ ಹೊರತು ಜ್ಞಾನವಂತರಾಗಿ ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಸಿ.ಇ.ಶಂಕರ್ ತಿಳಿಸಿದರು. ಅರಸೀಕೆರೆಯಲ್ಲಿ ಶ್ರೀನಿವಾಸ ನಗರದಲ್ಲಿನ ಸೇವಾ ಸಂಕಲ್ಪ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.