• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಷಕರು ಇಟ್ಟಿರುವ ನಂಬಿಕೆ ಹುಸಿ ಮಾಡಬೇಡಿ
ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿ ಮಠದ ಆವರಣದಲ್ಲಿ ಸೀತಾಲಕ್ಷ್ಮಿ ರಂಗಸ್ವಾಮಿಶೆಟ್ಟಿ ಚಾರಿಟಬಲ್ ಟ್ರಸ್ಟ್ ಆಯೋಜನೆ ಮಾಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಅರುಣ್ ಮಾತನಾಡಿದರು. ನಿಮ್ಮ ಜ್ಞಾನದ ಹಸಿವನ್ನು ಹೆಚ್ಚಿಸಿಕೊಂಡು ಇನ್ನೂ ಉನ್ನತ ಸ್ಥಾನ ಪಡೆಯುವ ಮನಸ್ಥಿತಿಯಲ್ಲಿ ಕಲಿಕೆಯನ್ನು ಮುಂದುವರಿಸಿ ಮತ್ತು ನಿಮ್ಮ ಮೇಲೆ ಪೋಷಕರು ಇಟ್ಟಿರುವ ನಂಬಿಕೆ ಹಾಗೂ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಜಾಗೃತರಾಗಿರಿ ಎಂದು ಸಬ್‌ ಇನ್‌ಸ್ಪೆಕ್ಟರ್‌ ಅರುಣ್ ಸಲಹೆ ನೀಡಿದರು.
ರಸ್ತೆ ಗುಂಡಿ ಮುಚ್ಚುವ ಮೂಲಕ ಸ್ವಾತಂತ್ರ್ಯೋತ್ಸವ
ಹಲವಾರು ಅನಾಥ ವಯೋವೃದ್ಧರಿಗೆ ಆಶ್ರಯವಾಗಿರುವ ನಾಗಣ್ಣ ಕುಟುಂಬ ಈಗ ವಾಹನ ಸವಾರರು ರಸ್ತೆಯಲ್ಲಿ ಓಡಾಡುವಾಗ ಗುಂಡಿಗಳಲ್ಲಿ ಬಿದ್ದು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದನ್ನು ಗಮನಿಸಿದ ನಾಗಣ್ಣ ತಮ್ಮ ಸ್ವಂತ ಖರ್ಚಿನಲ್ಲೇ ಒಬ್ಬರೇ ಶ್ರಮಪಟ್ಟು ಮೈಸೂರು ರಸ್ತೆ, ಟಿವಿಎಸ್ ಶೋರೂಂ ಮುಂಭಾಗದಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿ ಜನರಿಗೆ ಅರಿವು ಮೂಡಿಸಿ ಸ್ವಾತಂತ್ರ್ಯ ದಿನಾಚರಣೆ ಮಾಡಿದ್ದಾರೆ.
ಅರೇಹಳ್ಳಿ ಹೋಬಳಿಯಲ್ಲಿ ಕಾಡಾನೆಗಳ ಹಿಂಡು
ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ವ್ಯಾಪ್ತಿಯಾದ್ಯಂತ ಕಾಡಾನೆಗಳು ನಡು ರಸ್ತೆಯಲ್ಲೆ ಗುಂಪಾಗಿ ಓಡಾಡುತ್ತಿದ್ದು ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.ಕಾಫಿ ತೋಟ, ಅಡಿಕೆ, ಬಾಳೆ, ಜೋಳದ ಹೊಲಗಳನ್ನು ಸಂಪೂರ್ಣ ಸರ್ವನಾಶ ಮಾಡುತ್ತಿರುವ ಅಷ್ಟು ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವುದರ ಮೂಲಕ ಬೆಳೆ ನಷ್ಟದಿಂದ ಉಂಟಾಗುತ್ತಿರುವ ಆರ್ಥಿಕ ನಷ್ಟದಿಂದ ಪಾರು ಮಾಡಿ ಎಂಬುದು ರೈತರ ಒತ್ತಾಯವಾಗಿದೆ.
ನಗರದಲ್ಲಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಈ ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ರಾಜ್ಯಪಾಲರು ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ನೀವು ಬಿಜೆಪಿ ಅವರ ಕೈಗೊಂಬೆಯಾಗಿ, ರಾಜ್ಯಪಾಲರ ಕಚೇರಿಯನ್ನೇ ಬಿಜೆಪಿ ಮುಖಂಡರ ಅಂಗಳವನ್ನಾಗಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಏಜೆಂಟರ ರೀತಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರು ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿದ್ದು, ಇಂತಹ ವರ್ತನೆ ಖಂಡಿಸಿ ಆ.೧೯ರ ಸೋಮವಾರ ಬೆಳಿಗ್ಗೆ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.
ಹಳ್ಳಿಮೈಸೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿಯನ್ನು ವಾಪನ್ ಪಡೆಯದೇ ಇದ್ದಲ್ಲಿ ನಾವು ಯಾವ ಹೋರಾಟಕ್ಕೂ ಸಿದ್ಧವೆಂದು ಕಾಂಗ್ರೆಸ್ ಮುಖಂಡ ಶ್ರೀಧರಗೌಡ ಎಚ್ಚರಿಸಿದರು. ತಾಲೂಕಿನ ಹಳ್ಳಿಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯವನರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ರಾಜ್ಯಪಾಲರ ಧೋರಣೆ ಖಂಡಿಸಿ ಆಯೋಜನೆ ಮಾಡಿದ್ದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರೀಯ ಹಬ್ಬಗಳ ಆಚರಣೆ ಕಾಟಾಚಾರಕ್ಕೆ ಆಗದಿರಲಿ
ಬೇಲೂರು ಪಟ್ಟಣದ ಮೂಡಿಗೆರೆ ರಸ್ತೆಯಲ್ಲಿರುವ ನ್ಯಾಯಾಲಯದ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ರಾಷ್ಟ್ರೀಯ ಹಬ್ಬಗಳನ್ನು ಕಾಟಾಚಾರಕ್ಕೆ ಆಚರಿಸದೆ ನಮಗೆ ಸ್ವಾತಂತ್ರ್ಯ ಬಂದ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಹೆಮ್ಮೆಯಿಂದ ಆಚರಿಸಿಕೊಳ್ಳಬೇಕು ಎಂದು ನ್ಯಾ . ಎಂ ಎಸ್. ಶಶಿಕಲಾ ಹೇಳಿದರು. ಹತ್ತು ಜನ ಸಾಧಕರನ್ನು ಗುರುತಿಸಿ, ಅವರವರ ಸಾಧನೆಯನ್ನು ವೇದಿಕೆಯ ಮೂಲಕ ಪರಿಚಯಿಸಿ ಗೌರವಿಸಲಾಯಿತು.
ನಿರಾಶ್ರಿತ ವೃದ್ಧೆಗೆ ಶಾಸಕ ಮಂಜು ತಾತ್ಕಾಲಿಕ ಪರಿಹಾರ ವಿತರಣೆ
ಮಳೆಯಿಂದ ಮನೆ ಕಳೆದುಕೊಂಡು ಪರದಾಡುತ್ತಿದ್ದ ವೃದ್ಧೆಯೊಬ್ಬರ ಮನೆಗೆ ಭೇಟಿ ನೀಡಿ ಆಕೆಗೆ ತಾತ್ಕಾಲಿಕ ಪರಿಹಾರವನ್ನು ಶಾಸಕ ಸಿಮೆಂಟ್ ಮಂಜು ಒದಗಿಸಿದ್ದಾರೆ. ವೃದ್ಧೆಯ ಕಷ್ಟವನ್ನು ತಿಳಿದ ಶಾಸಕರು ಮನೆಯನ್ನು ವೀಕ್ಷಿಸಿ ಕ್ಯಾಮನಹಳ್ಳಿ ಗ್ರಾ.ಪಂ ಪಿಡಿಒ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ತಕ್ಷಣ ತಾತ್ಕಾಲಿಕ ಪರಿಹಾರ ವಿತರಿಸಲು ಆದೇಶಿಸಿದರು. ಈ ಹಿನ್ನೆಲೆಯಲ್ಲಿ ಕ್ಯಾಮನಹಳ್ಳಿ ಗ್ರಾ.ಪಂ ಪಿಡಿಒ ಗ್ರಾ.ಪಂ ಅಧ್ಯಕ್ಷ ಸಚಿನ್‌ ಅವರೊಡನೆ ವೃದ್ಧೆಯ ಮನೆಗೆ ಆಗಮಿಸಿ ೫೦೦೦ ರು.ಗಳ ತಾತ್ಕಾಲಿಕ ಪರಿಹಾರವನ್ನು ವಿತರಿಸಿದರು.
ಬಸವಾಪಟ್ಟಣದ ಪತ್ರಕರ್ತ ಜಯಕುಮಾರ್‌ಗೆ ಸನ್ಮಾನ
ಅರಕಲಗೂಡು ತಾಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ೭೮ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಲವರಿಗೆ ಅರಕಲಗೂಡು ಸರ್ಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ ಮುಖ್ಯ ಕಾರ್ಯಕ್ರಮದಲ್ಲಿ ಕಳೆದ ೧೫ ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಬಸವಾಪಟ್ಟಣ ಗ್ರಾಮದ ಬಿ.ಸಿ ಜಯಕುಮಾರ್ ಸನ್ಮಾನಿಸಿ ಗೌರವಿಸಲಾಯಿತು.
ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ
ಸಕಲೇಶಪುರ ತಾಲೂಕಿನ ಗ್ರಾಮಾಂತರ ಠಾಣೆ ವ್ಯಾಪ್ತಿಯ ಸುಳ್ಳಕ್ಕಿ ಗ್ರಾಮದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲು ತಯಾರಿ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಕಾರ್ಯಪ್ರವೃತ್ತರಾದ ಗ್ರಾಮಾಂತರ ಪೊಲೀಸರು, ಸ್ಥಳಕ್ಕೆ ಹೋಗುವ ಮುನ್ನವೇ ಸುಳ್ಳಕ್ಕಿಯಿಂದ ಬ್ಯಾಕರವಳ್ಳಿ ಸಂಪರ್ಕಿಸುವ ರಸ್ತೆಯಲ್ಲಿ ಕೆಎ-೪೬-೬೭೧೩ ಗೂಡ್ಸ್ ಆಟೋ ವಾಹನದಲ್ಲಿ ಅಕ್ರಮವಾಗಿ ೨ ಹೋರಿಗಳು ೧ ಹಸುವನ್ನು ತುಂಬಿ ಕಳುಹಿಸಲು ಯತ್ನಿಸಿದಾಗ, ಗ್ರಾಮಾಂತರ ಠಾಣೆಯ ಪೋಲಿಸ್ ಸಬ್‌ಇನ್ಸ್‌ಪೆಕ್ಟರ್ ತಿಪ್ಪಾರೆಡ್ಡಿ ವಾಹನದಲ್ಲಿದ್ದ ಹಸುಗಳನ್ನು ವಶಪಡಿಸಿಕೊಂಡು ಅರಸೀಕೆರೆ ಗೋಶಾಲೆಗೆ ಕಳುಹಿಸಿದ್ದಾರೆ.
ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸಬೇಕು
ಶಾಲಾ ತೋಟಗಾರಿಕಾ ಶಿಕ್ಷಣ ಶಿಕ್ಷಕರಾದ ಸಿದ್ದಮಲ್ಲಪ್ಪರವರು ಮಾತನಾಡುತ್ತಾ, ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸಿ ಕಾಪಾಡಿಕೊಂಡು ಹೋಗಬೇಕು. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆಂತರಿಕ ಸ್ವಾತಂತ್ರ್ಯವೂ ಅಗತ್ಯವಿದೆ ಎಂದು ಶಿಕ್ಷಕ ನಾಗರಾಜ್ ಕೋಟೆಕರ್‌ ಹೇಳಿದರು. ಕೊಣನೂರು ಹೋಬಳಿಯ ಸಿದ್ದಾಪುರ ಗೇಟ್ ಸರ್ಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡರು.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 553
  • next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved