• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏತ ನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ : ಶಾಸಕ ಎ.ಮಂಜು

ಅಡಿಕೆ ಬೊಮ್ಮನಹಳ್ಳಿ ಏತನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ ದೊರೆಯಲಿದೆ. ಹಣ ಬಿಡುಗಡೆಯಾಗಿದ್ದು ಭೂಮಿ ನೀಡಿರುವ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಎ.ಮಂಜು ತಿಳಿಸಿದರು.

ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಎದುರಿಸಲಿ : ವಿಧಾನ ಪರಿಷತ್ ಸದಸ್ಯ ಅಶ್ವತ್ಥ್‌ ನಾರಾಯಣ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ನೀಡಿರುವ ಆದೇಶ ಶ್ಲಾಘನೀಯ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದುದು ಎಂದು ವಿಧಾನ ಪರಿಷತ್ ಸದಸ್ಯ ಅಶ್ವತ್ಥ್‌ ನಾರಾಯಣ್ ತಿಳಿಸಿದರು. 

ಗ್ರಾಮೀಣಾಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ
ಅರಕಲಗೂಡು ಪಟ್ಟಣದ ಶಿಕ್ಷಕರ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಏರ್ಪಡಿಸಿದ ಸುಜ್ಞಾನ ನಿಧಿ ಶಿಷ್ಯವೇತನ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಮಂಜೂರಾತಿ ಪತ್ರಗಳನ್ನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ವಿತರಿಸಿದರು. ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ವಿಷ ಆಹಾರ ಹಾಕಿ ನವಿಲುಗಳ ಹತ್ಯೆ
ಹೊಳೆನರಸೀಪುರ ತಾಲೂಕಿನ ಜಕ್ಕವಳ್ಳಿ ಸೋಮನಹಳ್ಳಿ ರಸ್ತೆಯಲ್ಲಿ ಕಿಡಿಗೇಡಿಗಳು ವಿಷ ಮಿಶ್ರಣ ಮಾಡಿ ಎರಡು ನವಿಲುಗಳನ್ನು ಹತ್ಯೆ ಮಾಡಿದ್ದು, ಈ ರೀತಿ ಬಹಳ ನವಿಲುಗಳನ್ನು ಹತ್ಯೆ ಮಾಡಲಾಗಿದೆ ಎಂದು ಪ್ರತ್ಯಕ್ಷದರ್ಶಿ ಆರೋಪಿಸಿದ್ದಾರೆ. ಕಸಬಾ ಹೋಬಳಿಯ ಜಕ್ಕವಳ್ಳಿ, ಸೋಮನಹಳ್ಳಿ ಹಾಗೂ ಸುತ್ತಮುತ್ತಲಿನ ಹಲವಾರು ಗ್ರಾಮಗಳಲ್ಲಿ ಸಾವಿರಾರು ನವಿಲುಗಳು ಇದ್ದು, ಇತ್ತೀಚಿನ ದಿನಗಳಲ್ಲಿ ಗ್ರಾಮದ ಒಳಗೆ ಕೋಳಿಗಳಿಗೆ ಹಾಕುವ ಭತ್ತ ರಾಗಿಯನ್ನು ಬಿಡದೇ ತಿನ್ನುತ್ತಿದ್ದವು ಎನ್ನಲಾಗಿದೆ. ನವಿಲುಗಳ ಹಾವಳಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಮತ್ತು ಬೆಳೆಗಳ ರಕ್ಷಣೆಗಾಗಿ ಕಬ್ಬಿನ ಗದ್ದೆಗಳಲ್ಲಿ ಹಾಗೂ ಇದರೆ ಸ್ಥಳಗಳಲ್ಲಿ ನವಿಲುಗಳಿಗೆ ವಿಷ ನೀಡಿ ಕೊಲ್ಲಲಾಗುತ್ತಿದೆ ಎಂದು ತಿಳಿದು ಬಂದಿದೆ.
ಆಲೂರು ತಾಲೂಕು ಆಸ್ಪತ್ರೆ ವೈದ್ಯರಿಂದ ಪ್ರತಿಭಟನೆ
ಆಲೂರು ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್ ಫಾತಿಮಾರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಇತ್ತೀಚೆಗೆ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ದೇಶದಲ್ಲೇ ತಲೆತಗ್ಗಿಸುವ ಪ್ರಕರಣವಾಗಿದೆ. ಇಡೀ ದೇಶದ ಜನತೆಯ ಆರೋಗ್ಯವನ್ನು ಕಾಪಾಡುವ ವೈದ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರು ನಿರ್ಭೀತಿಯಿಂದ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಕಿಡಿಗೇಡಿಗಳು ಆಸ್ಪತ್ರೆಗೆ ನುಗ್ಗಿ ಬೆಂಕಿ ಹಚ್ಚಿ ಪಿಠೋಪಕರಣಗಳನ್ನು ಒಡೆದು ಧ್ವಂಸ ಮಾಡಿದ್ದಾರೆ. ಈ ರೀತಿ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವೈದ್ಯರು ಒತ್ತಾಯಿಸಿದರು.
ಅಕ್ಕನಹಳ್ಳಿ ಕೂಡು ಶಾಲಾ ಮಕ್ಕಳಿಗೆ ದಾನಿಗಳಿಂದ ಕಲಿಕಾ ಸಾಮಗ್ರಿ
ನುಗ್ಗೇಹಳ್ಳಿ ಹೋಬಳಿಯ ಅಕ್ಕನಹಳ್ಳಿಕೂಡು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸಮಾಜ ಸೇವಕ ಅಬ್ದುಲ್ ಬಾಸಿತ್ ನೋಟ್‌ಬುಕ್, ಪೆನ್ ವಿತರಣೆ ಮಾಡಿದರು. ಅಕ್ಕನಹಳ್ಳಿ ಕೂಡು ಸರ್ಕಾರಿ ಶಾಲೆಯ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ದೃಷ್ಟಿಯಿಂದ ನೋಟ್‌ಬುಕ್ ಹಾಗೂ ಪೆನ್ ವಿತರಣೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಈ ಶಾಲೆ ಮಕ್ಕಳಿಗೆ ಇನ್ನು ಹೆಚ್ಚಿನ ಸಹಾಯ ಮಾಡುವುದಾಗಿ ತಿಳಿಸಿದ ಅವರು, ಸರ್ಕಾರಿ ಶಾಲೆಗಳನ್ನು ಉಳಿಸಲು ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.
ಅರಕಲಗೂಡಲ್ಲೂ ವೈದ್ಯರ ಪ್ರತಿಭಟನೆ
ಕರ್ತವ್ಯನಿರತ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ದುಷ್ಕೃತ್ಯವನ್ನು ಖಂಡಿಸಿ ವೈದ್ಯರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ತಾಲೂಕು ಸರ್ಕಾರಿ ವೈದ್ಯರ ಸಂಘದ ಘಟಕ ಹಾಗೂ ಖಾಸಗಿ ಘಟಕದ ವೈದರು, ಸಿಬ್ಬಂದಿ ಪಟ್ಟಣದ ಅನಕೃ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಮಾತನಾಡಿ, ಕರ್ತವ್ಯ ನಿರತ ವೈದರ ಮೇಲಿನ ಅತ್ಯಾಚಾರ, ಕೊಲೆಯಾಗಿರುವುದು ಅಮಾನುಷ ಕೃತ್ಯವಾಗಿದೆ. ಇದರಿಂದ ವೈದ್ಯಕೀಯ ಸೇವೆ ಸಲ್ಲಿಸುವ ವೃಂದಕ್ಕೆ ಜೀವ ಭಯ ಉಂಟು ಮಾಡಿದೆ. ವೈದ್ಯರಿಗೆ ಸೂಕ್ತ ಭದ್ರತೆ ಇಲ್ಲವಾಗಿದೆ ಎಂದು ವಿಷಾದಿಸಿದರು.
ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸ್ತಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಬಾಣಾವರದ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 206 ಅನ್ನು ತಡೆದು, ಟೈಯರ್‌ಗೆ ಬೆಂಕಿ ಹಚ್ಚುವುದರ ಮೂಲಕ ರಾಜ್ಯಪಾಲರ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.
ನೀರಿಗೆ ಬಿದ್ದು ಇಬ್ಬರು ಸಾವು
ಬೇಲೂರು ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿ ಕಾಲುಜಾರಿ ನೀರಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಮಹೇಶ್ ಎಂಬುವರ ಮಗ ಶ್ರೀಕಾಂತ್ (15 ವರ್ಷ) ಹಾಗೂ ಚಿಕ್ಕವಯಸ್ಸಿನಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಂತಹ ವಿಜಯ್ (18 ವರ್ಷ) ಗ್ರಾಮದ ದೊಡ್ಡ ಕೆರೆಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಜೋರಾಗಿ ಮಳೆ ಬರುತ್ತಿದ್ದ ಕಾರಣ ಪಕ್ಕದಲ್ಲಿದ್ದಂತಹ ಮರದ ಬಳಿ ನಿಂತ ಸಂದರ್ಭದಲ್ಲಿ ವಿಜಯ್ ಚಪ್ಪಲಿ ಜಾರಿ ನೀರಿಗೆ ಬಿದಿದೆ. ಅದನ್ನು ತರಲು ಹೋದಾಗ ಶ್ರೀಕಾಂತ್ ನೀರಿಗೆ ಬಿದ್ದಿದ್ದಾನೆ. ದಡದಲ್ಲಿದ್ದ ವಿಜಯ್ ಆತನನ್ನು ರಕ್ಷಿಸಲು ಹೋಗಿ ತಾನು ಸಹ ಮುಳುಗಿ ಸಾವನ್ನಪ್ಪಿದ್ದಾನೆ.
ಡೆಂಘೀ ಮುಕ್ತವಾಗಲು ಎಲ್ಲರೂ ಶ್ರಮಿಸೋಣ
ರೋಟರಿ ಕ್ಲಬ್ ಬೇಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಮೇದೂರು ಹಾಗೂ ಸರ್ಕಾರಿ ಪ್ರೌಢಶಾಲೆ ಗಬ್ಬಲಗೋಡು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಕ್ಲಬ್ ಕಾರ್ಯದರ್ಶಿ ಬಿ.ಬಿ.ಶಿವರಾಜು, ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಂಡರೆ ಡೆಂಘೀ ಬಗ್ಗೆ ಭಯಪಡಬೇಕಾದ ಅವಶ್ಯಕತೆ ಇಲ್ಲ. ಆದರೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಅಪಾಯ ಮಾತ್ರ ಕಟ್ಟಿಟ್ಟ ಬುತ್ತಿ ಎಂದರು.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 553
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved