ಪ್ರಜ್ವಲ್ ಎನ್ಡಿಎ ಅಭ್ಯರ್ಥಿ ಎಂದು ಹೇಳಿಲ್ಲಸಂಸದ ಪ್ರಜ್ವಲ್ ರೇವಣ್ಣ ಮುಂದಿನ ಲೋಕಸಭಾ ಚುನಾವಣೆಯ ಹಾಸನ ಕ್ಷೇತ್ರ ಅಭ್ಯರ್ಥಿ ಎಂದು ಬಿಜೆಪಿ ನಾಯಕರು ಎಲ್ಲಿಯೂ ಹೇಳಿಲ್ಲ. ಆದರೆ, ಮಾಜಿ ಪ್ರಧಾನಿ ದೇವೇಗೌಡರು ಎನ್ಡಿಎ ಅಭ್ಯರ್ಥಿಯ ಗೆಲುವಿನ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದಾರೆ. ಆದರೆ ಎನ್ಡಿಎ ಅಭ್ಯರ್ಥಿ ಯಾರು ಎನ್ನುವುದು ಸೀಟು ಹಂಚಿಕೆ ವೇಳೆ ತೀರ್ಮಾನ ಆಗಲಿದೆ ಎಂದು ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಹೇಳಿದರು. ಹಾಸನದ ಕಾರ್ಯಕ್ರಮದಲ್ಲಿ ಮಾತನಾಡಿದರು.