ತೋಟದ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಲು ಹಾಸನ ಜಿಲ್ಲಾಧಿಕಾರಿಗೆ ಒತ್ತಾಯತೋಟ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸುವಂತೆ, ದಿನಕ್ಕೆ ೧೦೦೦ ರು. ಕನಿಷ್ಠ ಕೂಲಿ ನಿಗದಿಪಡಿಸುವಂತೆ ಹಾಗೂ ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ೨ನೇ ದಿನದ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರೊವೆನ್ಷಿಯಲ್ ಪ್ಲಾಂಟೇಷನ್ ಕಾರ್ಮಿಕರ ಸಂಘದಿಂದ ತೋಟ ಕಾರ್ಮಿಕರು ಬುಧವಾರ ಹಾಸನದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.