ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಅರಕಲಗೂಡಲ್ಲಿ ರಾಮನ ಜಪಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಅರಕಲಗೂಡು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ರಾಮನಾಮ ಸ್ಮರಣೆ ವಿಜೃಂಭಣೆಯಿಂದ ನೆರವೇರಿತು. ವಿವಿಧ ದೇಗುಲಗಳಲ್ಲಿ ಪೂಜೆ ನೆರವೇರಿಸಿ, ಪಾನಕ, ಮಜ್ಜಿಗೆ, ಪ್ರಸಾದ ವಿತರಣೆ ವಿತರಿಸಲಾಯಿತು. ಅಯೋಧ್ಯೆ ರಾಮನ ಭಿತ್ತಿಚಿತ್ರಗಳು ದೇಗುಲಗಳ ಬಳಿ ರಾರಾಜಿಸಿದವು. ಕೇವಲ ನಗರ ಪ್ರದೇಶಗಳಷ್ಟೇಯಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಭ್ರಮಿಸಲಾಯಿತು.