• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜುಲೈ ೨೧ ರಿಂದ ಹಾಸನದಲ್ಲಿ ಚಾತುರ್ಮಾಸ ವ್ರತಾಚರಣೆ
ಹಾಸನದಲ್ಲಿ ಜು.೨೧ ರಿಂದ ಸೆ.೧೮ರ ವರೆಗೂ ವಿದ್ಯಾಭಿನವ ಸುಬ್ರಹ್ಮಣ್ಯ ಭಾರತೀ ಮಹಾಸ್ವಾಮಿಗಳ ಚಾತುರ್ಮಾಸ ವ್ರತವನ್ನು ಆಯೋಜಿಸಲಾಗಿದೆ ಎಂದು ಹಾಸನ ಜಿಲ್ಲಾ ಬ್ರಾಹ್ಮಣ ಸಭಾದ ನೂತನ ಅಧ್ಯಕ್ಷ ಎಚ್.ಎಸ್.ಮಂಜುನಾಥ ಮೂರ್ತಿ ತಿಳಿಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಭಾರಿ ಮಳೆಯಿಂದ ಬೇಲೂರಿನಲ್ಲಿ ಮನೆ ಕುಸಿತ
ಬೇಲೂರಿನ ಪುರಸಭೆ ವ್ಯಾಪ್ತಿಯ ೧೦ನೇ ವಾರ್ಡ್‌ನ ದುರ್ಗಾನಗರದ ಕೂಲಿ ಕಾರ್ಮಿಕರಾಗಿರುವ ಅನುಸೂಯಮ್ಮ ಎಂಬುವವರ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ಯಾವುದೇ ಜೀವ ಹಾನಿಯಾಗಿಲ್ಲ.
ಹೊಳೆನರಸೀಪುರದ ದೇವಾಲಯದಲ್ಲಿ ಜಾರಿ ಬಿದ್ದ ಶಾಸಕ ಎಚ್‌.ಡಿ. ರೇವಣ್ಣ: ಪಕ್ಕೆಲುಬಿಗೆ ಹಾನಿ
ಹೊಳೆಮರಸೀಪುರದ ಹರದನಹಳ್ಳಿಯ ಶ್ರೀ ದೇವೇಶ್ವರ ದೇವಾಲಯದಲ್ಲಿ ಶಾಸಕ ಎಚ್.ಡಿ.ರೇವಣ್ಣ ಅವರು ಜಾರಿ ಬಿದ್ದು, ಅವರ ಪಕ್ಕೆಲುಬುಗಳಿಗೆ ಹಾನಿಯಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆದು, ವಿಶ್ರಾಂತಿಗಾಗಿ ಬೆಂಗಳೂರಿಗೆ ತೆರಳಿದ್ದಾರೆ.
ಕನ್ನಡ ಸಾಹಿತ್ಯಕ್ಕೆ ಅನಕೃ ಕೊಡುಗೆ ಅಪಾರವಾದುದು: ಆರ್.ಕೆ.ಪದ್ಮನಾಭ ಅಭಿಮಾನಿ ಬಳಗದ ಪ್ರವೀಣ್
ಕನ್ನಡದ ಸಾಹಿತ್ಯ ಸಾರ್ವಭೌಮ ಡಾ. ಅನಕೃ ಒಂದು ನೆನಪು ಅನಕೃ ಪ್ರಶಸ್ತಿ ಪ್ರದಾನದ ದಶಮಾನೋತ್ಸವ ಸಮಾರಂಭವನ್ನು ಜು. 21ರಂದು ಬೆಳಿಗ್ಗೆ 11ಕ್ಕೆ ಶಿಕ್ಷಕರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಆರ್. ಕೆ. ಪದ್ಮನಾಭ ಅಭಿಮಾನಿ ಬಳಗದ ಪ್ರವೀಣ್ ತಿಳಿಸಿದರು. ಅರಕಲಗೂಡು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿದ್ಯಾರ್ಥಿಗಳ ಉತ್ತಮ ಸಾಧನೆಯೇ ಪೋಷಕರಿಗೆ ಕೊಡುಗೆ
ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಬಿಜಿಎಸ್‌ ಪಿಯು ಕಾಲೇಜಿನ ಸ್ವಾಗತೋತ್ಸವ-೨೦೨೪ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ ಕಲಿತು, ಓದುವ ಕಡೆ ಹೆಚ್ಚಿನ ಗಮನ ನೀಡಿ, ಸಾಧನೆ ಮಾಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಇರುವುದೇ ಪೋಷಕರಿಗೆ ನೀವು ಕೊಡುವ ಬಹುದೊಡ್ಡ ಕೊಡುಗೆ ಎಂದರು.
ಪಡುವಳಲು ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ರಾಜು
ಪಡುವಳಲು ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಪಿ ಸಿ ರಾಜು ಅವಿರೋಧವಾಗಿ ಆಯ್ಕೆಯಾದರು.ನಮ್ಮ ಊರಿನ ಹಾಲಿನ ಡೈರಿ ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗುತ್ತಿದೆ. ಮುಂದಿನ ದಿನಗಳಲ್ಲಿ ನಿರ್ದೇಶಕರು ಹಾಗೂ ಗ್ರಾಮಸ್ಥರ ಸಲಹೆ ಸಹಕಾರವನ್ನು ತೆಗೆದುಕೊಂಡು ನೂತನ ಹಾಲಿನ ಡೇರಿಯ ಉಳಿದ ಕಟ್ಟಡದ ಕಾಮಗಾರಿ ಪೂರ್ಣಗೊಳಿಸುವುದರ ಬಗ್ಗೆ ಹಾಲಿನ ಡೇರಿಯನ್ನು ಉತ್ತಮವಾಗಿ ನಡೆಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದರು.
ನೇಣು ಬಿಗಿದುಕೊಂಡು ಶಿಕ್ಷಕ ಆತ್ಮಹತ್ಯೆ
ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮರಿತಮ್ಮನಹಳ್ಳಿಯಲ್ಲಿ ಮಂಗಳವಾರ ನಡೆದಿದ್ದು, ಸಂಬಂಧಿಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಮಹಾಜರ್ ನಡೆಸಿದರು. ಬಳಿಕ ಅಂಗಡಿಗೆ ಅಳವಡಿಸಿದ್ದ ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ರಾತ್ರಿ 12.58ರಲ್ಲಿ ಟಾಟಾ ಏಸ್ ವಾಹನ ಹೋಗಿರುವುದು ಕಂಡುಬಂದಿದೆ. ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದರು. ವಿಷಯ ತಿಳಿದು ಆಗಮಿಸಿದ ನೂರಾರು ಮಂದಿ ಗ್ರಾಮಸ್ಥರು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
50 ಲಕ್ಷ ವೆಚ್ಚದಲ್ಲಿ ಬೋರನಕಟ್ಟೆಕೆರೆ ಅಭಿವೃದ್ಧಿ
ನುಗ್ಗೇಹಳ್ಳಿ ಹೋಬಳಿಯ ಹುಲಿಕೆರೆ ಗ್ರಾಮದಲ್ಲಿ ನಬಾರ್ಡ್ ವತಿಯಿಂದ ನಡೆಯಲಿರುವ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದ ಬೋರನಕಟ್ಟೆ ಕೆರೆಗೆ ತೋಟಿ ಏತ ನೀರಾವರಿ ಯೋಜನೆಯ ಮೂಲಕ ನೀರುಹರಿಸಲಾಗುತ್ತದೆ. ಕೆರೆ ಅಭಿವೃದ್ಧಿಗೆ ನೀಡಿರುವ 50 ಲಕ್ಷ ರು. ಅನುದಾನದಲ್ಲಿ ಸೇತುವೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಳಸಿಕೊಳ್ಳಲಾಗುತ್ತದೆ ಎಂದರು.
ಇಂದಿನ ಸಾಹಿತ್ಯದಲ್ಲಿ ಸಾಮಾಜಿಕ ಕಳಕಳಿ ಇರಲಿ
ಯುವ ಬರಹಗಾರರು,ಮುಕುಂದರಾಜು, ಅರಸೀಕೆರೆ ನಗರದಲ್ಲಿ ಸಾಹಿತಿಗಳ ಭೇಟಿ ಮಾಡಿ ಮಾತನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜು,ಈ ಹಿಂದೆ ಉತ್ತಮ ವಾತಾವರಣವಿತ್ತು. ಹಾಗಾಗಿ ಎಲ್ಲರೂ ಪರಿಸರ, ಪ್ರೇಮ, ಪ್ರೀತಿಗಳ ವಿಚಾರವಾಗಿ ಸಾಹಿತ್ಯವನ್ನು ರಚಿಸುತ್ತಿದ್ದರು. ಆದರೆ ಕಾಲ ಬದಲಾದಂತೆ ಸಾಮಾಜಿಕವಾಗಿ ಬರವಣಿಗೆಗಳು ಬದಲಾಗಬೇಕಿದೆ ಎಂದರು
ಮಾಲೇಕಲ್ಲು ತಿರುಪತಿ ಜಾತ್ರಾ ಮಹೋತ್ಸವ
ಅರಸೀಕೆರೆ ತಾಲೂಕಿನ ಅಮರಗಿರಿ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀ ವೆಂಕಟರಮಣ ಜಾತ್ರಾ ಮಹೋತ್ಸವವು ಜು.೧೮ ಗುರುವಾರ ವಿಜೃಂಭಣೆಯಿಂದ ನೆರವೇರಲಿದೆ. ಆಷಾಢ ಮಾಸದ ದ್ವಾದಶಿಯಂದು ಜಾತ್ರಾ ಮಹೋತ್ಸವವನ್ನು ಪ್ರತಿ ವರ್ಷದಂತೆ ಆಯೋಜಿಸಲಾಗಿದೆ. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತಾದಿಗಳು ಜಾತ್ರಾ ಮಹೋತ್ಸವಕ್ಕೆ ಆಗಮಿಸಲಿದ್ದು, ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ವಿವಿಧ ಸಮಾಜಗಳು ಸೇರಿದಂತೆ ಸಮುದಾಯದವರು ಅನ್ನಸಂತರ್ಪಣೆ ಏರ್ಪಡಿಸಿದ್ದಾರೆ. ಜಾತ್ರೆಯಂದು ಅರಸೀಕೆರೆ ನಗರದಿಂದ ಕೆ.ಎಸ್‌.ಆರ್‌.ಟಿ.ಸಿ ವತಿಯಿಂದ ವಿಶೇಷ ಬಸ್ ಸಂಚಾರ ಏರ್ಪಡಿಸಲಾಗಿದೆ ಎಂದರು.
  • < previous
  • 1
  • ...
  • 385
  • 386
  • 387
  • 388
  • 389
  • 390
  • 391
  • 392
  • 393
  • ...
  • 552
  • next >
Top Stories
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved