ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆಮಲೆನಾಡು ಪ್ರದೇಶವಾದ ಸಕಲೇಶಪುರ ಹಾಗೂ ಅರೆ ಮಲೆನಾಡು ತಾಲೂಕುಗಳಾದ ಆಲೂರು, ಬೇಲೂರು, ಹಾಸನದಲ್ಲಿಯೂ ವ್ಯಾಪಕ ಮಳೆ ಬೀಳುತ್ತಿರುವುದರಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಈ ನಾಲ್ಕೂ ತಾಲೂಕುಗಳಲ್ಲಿ ಜು.16ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಅರಕಲಗೂಡು, ಚನ್ನರಾಯಪಟ್ಟಣ, ಹೊಳೆನರಸೀಪುರ ತಾಲೂಕುಗಳಲ್ಲಿಯೂ ಮಳೆ ಬೀಡುತ್ತಿದ್ದು, ಬರದ ತಾಲೂಕು ಎಂದೇ ಹೆಸರುವಾಸಿಯಾದ ಅರಸೀಕೆರೆ ಭಾಗದಲ್ಲಿ ಕೂಡ ಪೂರ್ಣ ಪ್ರಮಾಣದಲ್ಲಿ ಮೋಡ ಮುಸುಕಿದ ವಾತಾವರಣ ಇದೆ. ಆಗಾಗ ಮಳೆಯೂ ಬರುತ್ತಿದೆ.