ತಜ್ಞರ ಸಲಹೆ ಪಡೆದು ತೋಟಗಾರಿಕಾ ಬೆಳೆಯಲ್ಲಿ ಹೆಚ್ಚಿನ ಆದಾಯ ಗಳಿಸಿತಜ್ಞರ ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಂಡಲ್ಲಿ ರೈತರು ತೋಟಗಾರಿಕಾ ಬೆಳೆಗಳಲ್ಲಿ ಹೆಚ್ಚಿನ ಆದಾಯ ಗಳಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸತೀಶ್ ಹೇಳಿದರು. ಸಾಂಪ್ರದಾಯಿಕ ಬೆಳೆಗಳಿಂದ ಹೆಚ್ಚಿನ ಆದಾಯ ಕಂಡುಕೊಳ್ಳಲಾಗದ ಅನ್ನದಾತರಿಗೆ ದಾಳಿಂಬೆ, ಬಾಳೆ, ಅಡಕೆ ವರವಾಗಿ ಪರಿಣಮಿಸಿವೆ. ಯಾವುದೇ ಚಟುವಟಿಕೆ ಆರಂಭಿಸುವ ಮುನ್ನ ತಜ್ಞರ ಸಲಹೆ ಪಡೆಯವುದು ಸೂಕ್ತ ಎಂದು ಮಾಹಿತಿ ನೀಡಿದರು.