ಕ್ರೀಡೆಯಲ್ಲಿ ಶಕ್ತಿಯ ಜತೆಗೆ ಯುಕ್ತಿ ಇದ್ದಾಗಷ್ಟೇ ಗೆಲುವುಹಾಸನ ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ವಯೋಮಿತಿ ೧೪ರಿಂದ ೧೭ ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಹಾಗೂ ಮೈಸೂರು ವಿಭಾಗ ಮಟ್ಟದ ಥ್ರೋಬಾಲ್ ಪಂದ್ಯಾವಳಿ-೨೦೨೩-೨೪ನ್ನು ಜಿಲ್ಲಾಧಿಕಾರಿ ಸತ್ಯಭಾಮ ಉದ್ಘಾಟಿಸಿದರು.