ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಶಾಸಕರಿಂದ ಬರ ಅಧ್ಯಯನಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕರುಗಳಾದ ಎಚ್.ಡಿ.ರೇವಣ್ಣ, ಸಿ.ಎನ್. ಬಾಲಕೃಷ್ಣ ,ಎ.ಮಂಜು, ಎಚ್.ಪಿ.ಸ್ವರೂಪ್, ನೇತೃತ್ವದ ತಂಡವು ತಾಲೂಕಿನ ಕಸಬಾ ಹೋಬಳಿ ಗೌಡಗೆರೆ ಗ್ರಾಮಕ್ಕೆ ಭೇಟಿ ನೀಡಿತ್ತು. ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಪರಿಶೀಲಿಸಲಾಯ್ತು. ಬರದಿಂದ ಸಂಭವಿಸಿರುವ ಹಾನಿಯನ್ನು ವೀಕ್ಷಿಸಿ ರೈತರೊಂದಿಗೆ ಚರ್ಚೆ ನಡೆಸಿದರು.