ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರ ಕೊಡುಗೆ ಅಪಾರಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಲ್ಲಿನ ನಗರಸಭೆಯು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಅಭಿನಂದಿಸಿತು. ಹಿಂದೆ ಮಹಿಳೆಯರು ಹೆಚ್ಚು ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಇಂದಿನ ದಿನಗಳಲ್ಲಿ ಎಲ್ಲಾ ಸೌಲಭ್ಯಗಳು ದೊರೆಯುತ್ತಿದ್ದು, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯೂ ದುಡಿಯುತ್ತಿದ್ದಾರೆ, ಸರ್ಕಾರ ಮಹಿಳೆಯರಿಗಾಗಿ ಮಹಿಳಾ ದಿನವನ್ನು ಸಹ ಜಾರಿಗೆ ತಂದಿದೆ, ನಮ್ಮ ನಗರಸಭೆಯಲ್ಲಿಯೂ ಅನೇಕ ಮಹಿಳೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಣೆಯಾಗಿದೆ ಎಂದರು.