ಧರ್ಮಸ್ಥಳದಲ್ಲಿ ಪೌಷ್ಟಿಕ ಆಹಾರ ಉತ್ಪಾದನೆಗೆ ಆದ್ಯತೆಪೌಷ್ಟಿಕ ಆಹಾರವನ್ನು ಉತ್ಪಾದಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾಧಿಕಾರಿ ಅಕ್ಷತಾ ರೈ ಹೇಳಿದರು. ಅರಸೀಕೆರೆಯ ಅಗ್ಗುಂದ ಸಿದ್ದರಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಸಂಸ್ಥೆಯ ವತಿಯಿಂದ ಸಿರಿಧಾನ್ಯ ಬಿತ್ತನೆ ಬೀಜಗಳಾದ ಸಾಮೆ, ಹಾರಕ, ಕೊರಲೆ ಬೀಜವನ್ನು ರೈತರಿಗೆ ವಿತರಿಸಿ ಮಾತನಾಡಿದರು.