ಬೇಡಿಕೆ ಈಡೇರಿಸುವ ಭರವಸೆ ಮೇರೆಗೆ ಮುಷ್ಕರ ಕೈಬಿಟ್ಟ ಭೂಮಾಪಕರುಕಳೆದ ಇಪ್ಪತ್ತೈದು ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದರೂ ಸರ್ಕಾರವು ಸಮಾನ ವೇತನ ಒದಗಿಸಿ ಸೇವೆ ಕಾಯಂಗೊಳಿಸದೆ ನಿರ್ಲಕ್ಷ್ಯ ವಹಿಸಿತ್ತು. ಕೆಲಸದ ಒತ್ತಡದ ನಡುವೆ ತಕರಾರು, ಕೋರ್ಟ್ ಆದೇಶ ಪ್ರಕರಣ, ಪೋಡಿಮುಕ್ತ, ಆಕಾರಬಂದ್, ಡಿಜಿಟೈಜೇಶನ್, ದರ್ಖಾಸ್ತು ಪೋಡಿ, ಸ್ವಮಿತ್ತ ಮತ್ತಿತರ ಪ್ರಕರಣಗಳನ್ನು ಒಳಗೊಂಡಂತೆ ಹಲವು ಕರ್ತವ್ಯಗಳನ್ನು ನಿಭಾಯಿಸುತ್ತಿದ್ದರೂ ಸರಿಯಾದ ವೇತನ ಆಗಿರಲಿಲ್ಲ.