ಡೆಂಘೀ ಕುರಿತು ಜಾಗೃತಿಗಾಗಿ ಕಾರ್ಯಕ್ರಮ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಡಾ.ವಿ.ಮಹೇಶ್ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ರೋಗ ಮತ್ತಷ್ಟು ಹರಡದಂತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮುಖ್ಯಾಧಿಕಾರಿ ಡಾ.ವಿ.ಮಹೇಶ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಏರ್ಪಡಿಸಿದ್ದ ಡೆಂಘೀ ಜ್ವರದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.