ಪೋಷಕರು ಖಾಸಗಿ ಶಾಲೆಗಳಿಗೆ ಮಾರುಹೋಗಿರುವುದು ದುರಂತಇಂದಿನ ಸಮಾಜದಲ್ಲಿ ಶಿಕ್ಷಣವೂ ವ್ಯಾಪಾರೀಕರಣವಾಗಿದ್ದು, ಕೆಲವು ಪಾಲಕ ವರ್ಗದವರು ಖಾಸಗಿ ಶಾಲೆಗಳ ಕಡೇ ಮುಖ ಮಾಡುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಮತ್ತು ಸದೃಢ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗಾಗಿ ಹಲವು ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಅನುಭವಿ ಅರ್ಹ ಶಿಕ್ಷಕರು, ಸುಸಜ್ಜಿತ ಕೊಠಡಿ, ಪ್ರಯೋಗಾಲಯ, ಗ್ರಂಥಾಲಯ, ಬೋಧನಾ ಸವಲತ್ತುಗಳು ಸೇರಿದಂತೆ ಸಾಕಷ್ಟು ಅನುಕೂಲ ನೀಡುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.