ಫೆಬ್ರವರಿ ೧೧ಕ್ಕೆ ಶಾಸಕ ಶಿವಲಿಂಗೇಗೌಡರಿಗೆ ಅಭಿನಂದನಾ ಕಾರ್ಯಕ್ರಮಅರಸೀಕೆರೆ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ಫೆಬ್ರವರಿ ೧೧ ರಂದು ನಗರದ ಬಿ.ಎಂ. ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಮನೆ ಹಿಂಭಾಗದ ರಸ್ತೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಈ.ಎಚ್.ಲಕ್ಷ್ಮಣ್ ಹಾಸನದಲ್ಲಿ ತಿಳಿಸಿದರು.