ಕೇಂದ್ರ ಸರ್ಕಾರದಿಂದ ಸಹಕಾರ ಸಂಘಗಳ ನಿರ್ಲಕ್ಷ್ಯ: ಶಾಸಕ ಶಿವಲಿಂಗೇಗೌಡಸಹಕಾರ ಸಂಘಗಳನ್ನು ನಿರ್ಲಕ್ಷಿಸುವ ಮೂಲಕ ರೈತರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷ, ಶಾಸಕ ಕೆ ಎಂ ಶಿವಲಿಂಗೇಗೌಡ ಅರಸೀಕೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಗಂಡಸಿ ಸಂತೆ ಮೈದಾನ ಸಹಕಾರ ಸಂಘಕ್ಕೆ ನೂತನವಾಗಿ ಅಧಿಕಾರ ವಹಿಸಿಕೊಂಡ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.