ಬೇಲೂರಿನ ಯುನೈಟೆಡ್ ಅಕಾಡೆಮಿ ಶಾಲೆಯ ವಿದ್ಯಾರ್ಥಿಗಳಿಗೆ ಬಂಗಾರದ ಪದಕಚಿಕ್ಕಮಗಳೂರಿನ ಕದ್ರಿಮಿದ್ರಿಯ ಇನ್ಫಾಂಟ್ ಜೀಸಸ್ ಶಾಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಟೇಕ್ವಾಂಡೋ ಅಸೋಷಿಯೇಶನ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಫ್ರೀಡಂ ಕಪ್ ಟೇಕ್ವಾಂಡೋ ಚಾಂಪಿಯನ್‌ಶಿಪ್ 2024ರ ಸ್ಪರ್ಧೆಗೆ ಹಾಸನ ಜಿಲ್ಲೆಯ ಬೇಲೂರಿನ ಯುನೈಟೆಡ್ ಅಕಾಡೆಮಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 14 ಬಂಗಾರದ ಪದಕ, 9 ಬೆಳ್ಳಿಯ ಪದಕ ಹಾಗೂ 16 ಕಂಚಿನ ಪದಕ ಪಡೆಯುವುದರ ಮೂಲಕ ರಾಜ್ಯಮಟ್ಟದ ಪ್ರೀಡಂ ಕಪ್ ಟೇಕ್ವಾಂಡೋ ಚಾಂಪಿಯನ್ ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ.