ಸಂಗೊಳ್ಳಿ ರಾಯಣ್ಣ ಆದರ್ಶ ಅಳವಡಿಸಿಕೊಳ್ಳಬೇಕು: ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯಸಂಗೊಳ್ಳಿ ರಾಯಣ್ಣ ಅವರ ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡು, ನಾಯಕ ಗುಣವಿರುವ ವ್ಯಕ್ತಿಗೆ ಬೆಂಬಲ ನೀಡಬೇಕು. ಹಿಂದುಳಿದವರು ಒಗ್ಗಟಿಲ್ಲದೇ ಹರಿದು ಹಂಚಿ ಹೋದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು. ಹೊಳೆನರಸೀಪುರ ತಾಲೂಕಿನ ಅಣ್ಣೇಚಾಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ, ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದರು.