ಕಾಯಂಗೆ ಆಗ್ರಹಿಸಿ ಮುಂದುವರಿದ ಅತಿಥಿ ಉಪನ್ಯಾಸಕರ ಪ್ರತಿಭಟನೆಕಳೆದ ಹಲವಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಮುಖ್ಯ ಬೇಡಿಕೆಯಾದ ಕಾಯಂಗೆ ಆಗ್ರಹಿಸಿ ಡೀಸಿ ಕಚೇರಿ ಮುಂದೆ ನಡೆಸಲಾಗುತ್ತಿರುವ ಪ್ರತಿಭಟನಾ ಧರಣಿಯು ೩ನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಅತಿಥಿ ಉಪನ್ಯಾಸಕರ ಮುಷ್ಕರದಿಂದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಳೆದ ಒಂದು ವಾರದಿಂದ ತರಗತಿಗಳು ನಡೆದಿರುವುದಿಲ್ಲ. ಪರೀಕ್ಷೆ ಪ್ರಾರಂಭವಾಗುವ ಸೂಚನೆ ನೀಡಿದ್ದು, ಇದು ವಿದ್ಯಾರ್ಥಿಗಳಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದರು.