ನಾಡಪ್ರಭು ಕೆಂಪೇಗೌಡರ ದೂರದೃಷ್ಟಿತ್ವವೇ ಆದರ್ಶಕೆಂಪೇಗೌಡರು ಶೌರ್ಯ, ಸಾಹಸ, ದೂರದೃಷ್ಟಿಗೆ ಹೆಸರಾಗಿದ್ದು, ಬೆಂಗಳೂರು ನಗರವನ್ನು ಜಾತಿ ಆಧಾರಿತವಾಗಿ ಮಾಡದೆ, ವೃತ್ತಿ ಆಧಾರಿತ ಭೂಮಿಯನ್ನಾಗಿ ಮಾಡಿದರು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ನಾಯಕರಾಗಿದ್ದರು. ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶ ವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿ ಬೆಂಗಳೂರು ನಗರ ಇಂದು ದೇಶ-ವಿದೇಶಿಗರಿಗೆ ಚಿರಪರಿಚಿತವಾಗಿದೆ ಎಂದರು.