• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ದನಿಯನ್ನು ಅಡಗಿಸುವ ಹುನ್ನಾರದಿಂದ ಬಂಧನ: ಕರವೇ ನಾರಾಯಣಗೌಡ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕನ್ನಡದ ದನಿಯನ್ನ ಅಡಗಿಸುವ ಹುನ್ನಾರ ನಡೆಸಿದೆ. ಅದಕ್ಕಾಗಿ ತಮ್ಮ ಬಂಧನ ಮಾಡಿದರು. ತಮ್ಮ ಸಂಘಟನೆ ಕಾರ್ಯಕರ್ತರು ಅವಿರತ ಹೋರಾಟಗಳ ಮೂಲಕ ತಕ್ಕ ಉತ್ತರವನ್ನು ನೀಡಿ ಗೆಲುವು ಸಾಧಿಸಿದರು. ಅದರಿಂದಲೇ ರಾಜ್ಯ ಸರ್ಕಾರ ಸುಗ್ರಿವಾಜ್ಞೆಯನ್ನು ಜಾರಿಗೆ ತಂದಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದರು. ಅರಸೀಕೆರೆಯಲ್ಲಿ ಮಾತನಾಡಿದರು.
ಸಂಸ್ಕಾರದಿಂದ ಮಕ್ಕಳಲ್ಲಿ ಉತ್ತಮ ಮೌಲ್ಯ: ಸರ್ವಜಯಾನಂದಾಜೀ ಮಹಾರಾಜ್
ಮಕ್ಕಳನ್ನು ಸಂಸ್ಕಾರವಂತರಾಗಿ ಬೆಳೆಸಿದಾಗ ಬೆಲೆ ಕಟ್ಟಲಾಗದಷ್ಟು ಮೌಲ್ಯಯುತ ಆಸ್ತಿವಂತರಾಗುತ್ತಾರೆ ಎಂದು ಮೈಸೂರು ರಾಮಕೃಷ್ಣ ಆಶ್ರಮದ ಸರ್ವಜಯಾನಂದಾಜೀ ಮಹಾರಾಜ್ ತಿಳಿಸಿದರು. ಅರಕಲಗೂಡಲ್ಲಿ ಆಯೋಜಿಸಿದ ಸ್ವಾಮಿ ವಿವೇಕಾನಂದ ಜಯಂತಿಲ್ಲಿ ಮಾತನಾಡಿದರು.
ಕ್ರಿಯಾಶೀಲರಾಗಿರಲು ಶಿಕ್ಷಕರಿಗೂ ಕ್ರೀಡೆ ಅಗತ್ಯ: ಬಿಇಒ ಮೋಹನ್ ಕುಮಾರ್
ದೇಹ ಸದೃಢವಾಗಿದ್ದರೆ ಮನಸ್ಸು ಸದೃಢವಾಗಿರುತ್ತದೆ. ತರಗತಿಯಲ್ಲಿ ಉತ್ಸಾಹಿಯಾಗಿ ಮಕ್ಕಳಿಗೆ ಬೋಧಿಸಲು ಶಿಕ್ಷಕರು ಹಸನ್ಮುಖಿಗಳಾಗಿರಬೇಕು. ಇದಕ್ಕೆ ಕ್ರೀಡೆಯು ಸಹಕಾರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮಾತನಾಡಿದರು.
ಹಳೇಬೀಡಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತ
೭೫ನೇ ಗಣರಾಜ್ಯೋತ್ಸವದ ಅಂಗವಾಗಿ ಹಾಸನ ಜಿಲ್ಲೆಯಾದ್ಯಂತ ೨೬ ರ ಜನವರಿಯಿಂದ ೨೩ರ ಫೆಬ್ರವರಿವರೆಗೆ ಹಾಸನ ಜಿಲ್ಲಾದ್ಯಂತ ಸಂವಿಧಾನ ಜಾಗೃತಿ, ಮತದಾನ ಜಾಗೃತಿ ಮೂಡಿಸುವ ಅಂಗವಾಗಿ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನಡೆಸಲಾಗುವುದು ಎಂದು ಬೇಲೂರು ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿ ರಮೇಶ್ ತಿಳಿಸಿದರು. ಹಳೇಬೀಡಿಗೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿಯ ಸದಸ್ಯರು, ಶಾಲಾ ಮಕ್ಕಳಿಂದ ಭವ್ಯ ಸ್ವಾಗತವನ್ನು ನೀಡಿದರು.
ಹೊಯ್ಸಳ ಆಟೋ ಮತ್ತು ಚಾಲಕರ ಸಂಘದ ಅಧ್ಯಕ್ಷರಾಗಿ ದಿವಾಕರ್ ಆಯ್ಕೆ
ಬೇಲೂರಿನ ಹೊಯ್ಸಳ ಆಟೋ ಮತ್ತು ಚಾಲಕರ ಸಂಘಕ್ಕೆ ಚುನಾವಣೆ ನಡೆದು ನೂತನ ಅಧ್ಯಕ್ಷರಾಗಿ ಬಿ.ಎನ್. ದಿವಾಕರ್ (ದೀಪು) ಭರ್ಜರಿಯಾಗಿ ಜಯ ಗಳಿಸಿದರು. ತಾಲೂಕಿನ ಹೊಯ್ಸಳ ಆಟೋ ಮತ್ತು ಚಾಲಕರ ಸಂಘಕ್ಕೆ ಈ ಹಿಂದೆ ಇದ್ದ ಜಯರಾಂ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಮೂರು ವರ್ಷಗಳ ಅವಧಿಗೆ ನಡೆದ ಚುನಾವಣೆಗೆ ಅಧ್ಯಕ್ಷಸ್ಥಾನಕ್ಕೆ ಮಾಜಿ ಅಧ್ಯಕ್ಷ ಲೊಕೇಶ್ (ರಾಮೇಗೌಡ) ಹಾಗೂ ದಿವಾಕರ್ (ದೀಪು) ಇಬ್ಬರು ನಾಮಪತ್ರ ಸಲ್ಲಿಸಿದ್ದರು.
ಪ್ರಜ್ವಲ್‌ ಎನ್‌ಡಿಎ ಅಭ್ಯರ್ಥಿ ಎಂದು ಹೇಳಿಲ್ಲ
ಸಂಸದ ಪ್ರಜ್ವಲ್‌ ರೇವಣ್ಣ ಮುಂದಿನ ಲೋಕಸಭಾ ಚುನಾವಣೆಯ ಹಾಸನ ಕ್ಷೇತ್ರ ಅಭ್ಯರ್ಥಿ ಎಂದು ಬಿಜೆಪಿ ನಾಯಕರು ಎಲ್ಲಿಯೂ ಹೇಳಿಲ್ಲ. ಆದರೆ, ಮಾಜಿ ಪ್ರಧಾನಿ ದೇವೇಗೌಡರು ಎನ್‌ಡಿಎ ಅಭ್ಯರ್ಥಿಯ ಗೆಲುವಿನ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದಾರೆ. ಆದರೆ ಎನ್‌ಡಿಎ ಅಭ್ಯರ್ಥಿ ಯಾರು ಎನ್ನುವುದು ಸೀಟು ಹಂಚಿಕೆ ವೇಳೆ ತೀರ್ಮಾನ ಆಗಲಿದೆ ಎಂದು ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಹೇಳಿದರು. ಹಾಸನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಕಲೇಶಪುರದಲ್ಲಿ ಜೇನು ಕೃಷಿಗೆ ಮಾರಕವಾದ ಆಧುನಿಕ ಪದ್ಧತಿ
ಮಲೆನಾಡಿನಲ್ಲಿ ಜೇನು ಕೃಷಿ ಅವನತಿಗೆ ಬದಲಾದ ಕೃಷಿ ಪದ್ದತಿ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ. ೧೯೩೦-೪೦ರ ದಶಕದಲ್ಲಿ ಕೊಡಗು,ಚಿಕ್ಕಮಗಳೂರು ಹಾಗು ಹಾಸನ ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಅಪಾರ ಪ್ರಮಾಣದಲ್ಲಿ ಉತ್ಪಾದಿಸಲಾಗುತ್ತಿದ್ದ ಜೇನಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ೧೯೪೦ ರಲ್ಲಿ ಮೂರು ಜಿಲ್ಲೆಗಳನ್ನು ಒಳಗೊಂಡಂತೆ ಸಕಲೇಶಪುರದಲ್ಲಿ ಜೇನು ಮಾರುಕಟ್ಟೆ ಸಹಕಾರ ಸಂಘ ಸ್ಥಾಪನೆಯಾಗಿತ್ತು. ಆದರೆ ಸಂಘಕ್ಕೆ ಸ್ಥಳೀಯವಾಗಿಯೇ ಜೇನು ದೊರಕದಾಗಿದೆ.
ಭಾರತೀಯರಿಗೆ ಸಂವಿಧಾನವೇ ಪ್ರೇರಕ ಶಕ್ತಿ: ದಲಿತ ಸಂಘರ್ಷ ಸಮಿತಿಯ ಬಿ.ಎಲ್.ಲಕ್ಷ್ಮಣ್ ಬೇಲೂರು
ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಶ್ರೇಷ್ಠ ಸಂವಿಧಾನವು ದೇಶದ ಜನರಿಗೆ ಪ್ರೇರಕ ಶಕ್ತಿಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹಾಸನ ಜಿಲ್ಲಾ ಪ್ರಧಾನ ಸಂಚಾಲಕ ಬಿ.ಎಲ್.ಲಕ್ಷ್ಮಣ್ ಬೇಲೂರು ಹೇಳಿದರು. ಬೇಲೂರಲ್ಲಿ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜನವರಿ ೩೦ ರಂದು ಸೌಹಾರ್ದತಾ ಮಾನವ ಸರಪಳಿ, ಸಭೆ
ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಗಾಂಧಿ ಹುತಾತ್ಮ ದಿನದ ಅಂಗವಾಗಿ ಕಾರ್ಯಕ್ರಮ ನಡೆಯುವಂತೆ ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಜನವರಿ ೩೦ ರಂದು ಸಂಜೆ ೪ ಗಂಟೆಗೆ ಸೌಹಾರ್ದತಾ ಮಾನವ ಸರಪಳಿ ಹಾಗೂ ಸಭೆ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಗೃಹ ಮಂಡಳಿ ಅಧ್ಯಕ್ಷರಾಗಿ ಶಾಸಕ ಶಿವಲಿಂಗೇಗೌಡ 2ನೇ ಬಾರಿ ಆಯ್ಕೆ
ಕರ್ನಾಟಕ ಗೃಹ ಮಂಡಳಿಗೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಸರ್ಕಾರದಿಂದ ಶಾಸಕ ಕೆಎಂ ಶಿವಲಿಂಗೇಗೌಡ ನಿಯೋಜನೆ ಆಗಿದ್ದಾರೆ. ಅವರಿಗೆ ಕಾಂಗ್ರೆಸ್ ಸೇರಿದಂತೆ ಪಕ್ಷಾತೀತವಾಗಿ ರಾಜಕೀಯ ಪಕ್ಷಗಳ ಸ್ಥಳೀಯ ಮುಖಂಡರು ಶುಭ ಕೋರಿದ್ದಾರೆ.
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 547
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved