ಗೃಹರಕ್ಷಕ ದಳದ ದಿನಾಚರಣೆಗೃಹ ರಕ್ಷಕ ಸಿಬ್ಬಂದಿಯು ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಆರ್ಟಿಒ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಜತೆಗೆ ಆಯಾ ಇಲಾಖೆಗಳ ನಿಯಮಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಾರೆ. ತುರ್ತು ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಪ್ರಾಣ ರಕ್ಷಣೆಗೆ ಮುಂದಾಗುತ್ತಾರೆ ಎಂದು ವೃತ್ತ ನಿರೀಕ್ಷಕ ಪ್ರದೀಪ್ ಬಿ.ಆರ್. ಶ್ಲಾಘಿಸಿದರು. ಜಿಲ್ಲಾ ಗೃಹರಕ್ಷಕ ದಳದ ಅಧಿಕಾರಿ ಧರ್ಮೇಂದ್ರ ಎಚ್.ಎಲ್. ಕಾರ್ಯಕ್ರಮದ ಆದ್ಯಕ್ಷತೆ ವಹಿಸಿ ಮಾತನಾಡಿದರು. ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಕೃಷ್ಣಯ್ಯ ಅವರನ್ನು ಗೌರವಿಸಿ, ಆತ್ಮೀಯವಾಗಿ ಬೀಳ್ಕೊಡಲಾಯಿತು.