ಈಶ್ವರ ದೇವಾಲಯಗಳಲ್ಲಿ ಶಿವಸ್ಮರಣೆ ಹೊಳೆನರಸೀಪುರ ಪಟ್ಟಣದ ಶ್ರೀ ನೀಲಕಂಠೇಶ್ವರಸ್ವಾಮಿ, ಮೈಲಾರಲಿಂಗೇಶ್ವರಸ್ವಾಮಿ, ಓಂಕಾರೇಶ್ವರಸ್ವಾಮಿ, ಶ್ರೀ ಲಕ್ಷ್ಮಣೇಶ್ವರಸ್ವಾಮಿ, ಏಕಾಂತ ರಾಮೇಶ್ವರಸ್ವಾಮಿ ಹಾಗೂ ತಾಲೂಕಿನ ವಿವಿಧ ಈಶ್ವರ ದೇವಾಲಯಗಳಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಬುಧವಾರ ವಿಶೇಷ ಪೂಜಾ ಕೈಂಕರ್ಯ ವೈಭವದಿಂದ ನಡೆಯಿತು. ಮೈಲಾರಲಿಂಗೇಶ್ವರ, ಎಳ್ಳೇಶಪುರದ ಎಳ್ಳುಲಿಂಗೇಶ್ವರ, ಬಾಗಿವಾಳುವಿನ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ರಾಮೇಶ್ವರ, ಹರದನಹಳ್ಳಿಯ ಈಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದವು.