ದೇಗುಲ ಲೋಕಾರ್ಪಣೆ ಕಾರ್ಯಕ್ರಮಜೀರ್ಣೋದ್ಧಾರಗೊಂಡ ಇತಿಹಾಸ ಪ್ರಸಿದ್ಧ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇಗುಲ ಲೋಕಾರ್ಪಣೆ ಮತ್ತು ಶ್ರೀ ಚಂಡಿಕೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆಯ ಕಳಸ ಕುಂಭಾಭಿಷೇಕ ಫೆ 23ಬರ ಭಾನುವಾರ, ಸೋಮವಾರ ನಡೆಯಲಿದೆ. ಡಾ. ವೀರೇಂದ್ರ ಹೆಗ್ಗಡೆ, ನುಗ್ಗೇಹಳ್ಳಿ ಪುರ ವರ್ಗ ಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಕತ್ತರಿ ಘಟ್ಟ ಮಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ್ ಗುರೂಜಿ, ತಾಲೂಕು ಮುಜರಾಯಿ ಅರ್ಕರ ಸಂಘದ ಅಧ್ಯಕ್ಷ ಶ್ರೀಧರ್ ಮೂರ್ತಿ, ಶಾಸಕ ಸಿ.ಎನ್. ಬಾಲಕೃಷ್ಣ, ಇತರರು ಪಾಲ್ಗೊಳ್ಳಲಿದ್ದಾರೆ.