ದೇವನಹಳ್ಳಿ ಚಲೋಗೆ ಬಡಗಲಪುರ ನಾಗೇಂದ್ರ ಕರೆಅನ್ಯಾಯದ ಭೂಸ್ವಾಧೀನ ವಿರೋಧಿಸಿ ಜೂನ್ ೨೫ರಂದು ದೇವನಹಳ್ಳಿ ಚಲೋ ಕರೆ ಕೊಟ್ಟಿರುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಮಾತಿಗೆ ತಪ್ಪಿದ ಸರ್ಕಾರದ ನೀತಿಯನ್ನು ಖಂಡಿಸಿ, ಭೂ ಸ್ವಾಧೀನವನ್ನು ಕೈ ಬಿಡಲೇಬೇಕೆಂದು ಆಗ್ರಹಿಸಿ ೨೫ರಂದು ಹಮ್ಮಿಕೊಂಡಿರುವ "ದೇವನಹಳ್ಳಿ ಚಲೋ " ಕಾರ್ಯಕ್ರಮದಲ್ಲಿ ರೈತ, ದಲಿತ, ಕಾರ್ಮಿಕ, ಮಹಿಳಾ, ಯುವಜನ ವಿದ್ಯಾರ್ಥಿ ಚಳವಳಿಗಾರರು ಅಲ್ಲದೇ ಪ್ರಗತಿಪರ ಹೋರಾಟಗಾರರು, ಸಾಹಿತಿ, ಕಲಾವಿದರು ರಾಜ್ಯದ ಮೂಲೆಮೂಲೆಗಳಿಂದಲೂ ದೇವನಹಳ್ಳಿಗೆ ಬಂದು ತಹಸೀಲ್ದಾರ್ ಕಚೇರಿಯ ಮುಂದೆ ಪ್ರತಿಭಟಿಸಲಿದ್ದಾರೆ ಎಂದರು.