ನದಿಗೆ ವಿಶೇಷ ಸಂರಕ್ಷಣೆಗೆ ಸರ್ಕಾರಕ್ಕೆ ಮನವಿಈ ಬಾರಿ ಜೂನ್ ತಿಂಗಳಲ್ಲಿ ಕಾವೇರಿ ನದಿ 2ನೇ ಬಾರಿಗೆ ಮೈದುಂಬಿ ಹರಿಯುತ್ತಿದ್ದು, ಸುತ್ತಮುತ್ತಲಿನ ಕೆಲ ಗ್ರಾಮಸ್ಥರು ಅಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಜೀವಜಲವಾದ ಕಾವೇರಿ ನದಿ ಸಂರಕ್ಷಣೆಗೆ ವಿಶೇಷ ಕಾಯ್ದೆ ರೂಪುಗೊಳ್ಳಬೇಕು ಎಂಬುದು ನಮ್ಮ ಆಶಯವಾಗಿದ್ದು, ಇಲ್ಲಿಯ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ವತಿಯಿಂದ ನಿರಂತರ ಕಾವೇರಿ ಅಭಿಯಾನ ಯಾತ್ರೆ ಮಾಡಿಕೊಂಡು ಬರುತ್ತಿರುವುದಕ್ಕೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಅರ್.ಎಸ್ ನರಸಿಂಹಮೂರ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾವೇರಿ ನದಿ ಉಳಿಸಲು ನದಿ ಸಂರಕ್ಷಣೆಗೆ ವಿಶೇಷ ಕಾಯ್ದೆ ಜಾರಿಗೆ ತಂದು ಕಾವೇರಿ ಮಲಿನವಾಗದ ರೀತಿ ಸ್ವಚ್ಛತೆ ಕಾಪಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದರು.