ಐವರು ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆಬೆಂಗಳೂರಿನಲ್ಲಿ ಈಚೆಗೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆದ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ, ತಾಲೂಕು ಬಿಜೆಪಿ ಪಕ್ಷದ ವತಿಯಿಂದ ಪಟ್ಟಣದ ಕೆ. ಆರ್. ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇದಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವರೇ ಕಾರಣಕರ್ತರಾಗಿದ್ದಾರೆ. ಆದರೆ ಕಣ್ಣೊರೆಸುವ ತಂತ್ರವಾಗಿ ಆಮಾಯಕ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ ಎಂದು ಆರೋಪಿಸಿದರು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಜಿ. ಪರಮೇಶ್ವರ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು. ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.