• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳನ್ನು ಶಿಕ್ಷಣದೊಂದಿಗೆ ಸುಸಂಸ್ಕೃತರನ್ನಾಗಿ ಮಾಡಿ
ಆಧುನಿಕತೆ ಬೆಳೆದಂತೆ ಮಕ್ಕಳು ಸಹ ಅದಕ್ಕೆ ಸ್ವಾಭಾವಿಕವಾಗಿಯೇ ಹೊಂದಿಕೊಳ್ಳುತ್ತಾ ಬರುತ್ತಿದ್ದಾರೆ, ಸಣ್ಣ ಮಕ್ಕಳು ಮೊಬೈಲ್ ಬಳಸುತ್ತಾರೆ, ಇದು ವೈಜ್ಞಾನಿಕ ಸ್ಪರ್ಧಾಯುಗ ಶಿಕ್ಷಣದೊಂದಿಗೆ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡುವ ನಿಟ್ಟಿನಲ್ಲಿ ಶಾಲೆಗಳು ಮತ್ತು ಪೋಷಕರು ಗಮನ ನೀಡಬೇಕೆಂದು ಕೆರೆಗೋಡಿ ರಂಗಾಪುರದ ಶ್ರೀ ಪರದೇಶಿಕೇಂದ್ರ ಸ್ವಾಮಿಗಳು ಕರೆ ನೀಡಿದರು.
ಯುವಜನರು ಕಾಡು ಬೆಳೆಸುವ ಸಂಕಲ್ಪ ತೊಡಬೇಕು
ಕಾಡು ಬೆಳೆಸಿ ನಾಡು ಉಳಿಸುವ ಸಂಕಲ್ಪವನ್ನು ಯುವಜನತೆ ಮಾಡದಿದ್ದರೆ ಮುಂದಿನ ಪೀಳಿಗೆ ಕಲುಷಿತ ಸಮಾಜದಲ್ಲಿ ಜೀವಿಸಬೇಕಾಗುತ್ತದೆ ಎಂದು ಅರಕಲಗೂಡು ಎಸ್‌ಬಿಐ ಶಾಖೆಯ ವ್ಯವಸ್ಥಾಪಕ ಅನಿಲ್ ಕುಮಾರ್ ಆತಂಕ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಚಾರ್ಯರಾದ ಗಾಯಿತ್ರಿ ಮಾತನಾಡಿ, ಕಾಲೇಜು ಆವರಣದಲ್ಲಿರುವ ಗಿಡಗಳನ್ನು ಪ್ರತಿ ವಿದ್ಯಾರ್ಥಿಗೆ ದತ್ತು ನೀಡುವ ಮೂಲಕ ಗಿಡಗಳ ರಕ್ಷಣೆಯ ಸಂಪೂರ್ಣ ಜವಾಬ್ದಾರಿಯನ್ನು ನೀಡಲಾಗುವುದು ಎಂದು ತಿಳಿಸಿದರು. ಈಗಲಾದರೂ ನಾವೆಲ್ಲ ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗದಿದ್ದರೆ ದೊಡ್ಡ ಅನಾಹುತ ಆಗಲಿದೆ ಎಂದರು.
ಗಿಡಗಳನ್ನು ನೆಟ್ಟು ಪೋಷಿಸುವ ಕೆಲಸವಾಗಬೇಕು
ದಿನನಿತ್ಯದ ಜೀವನದಲ್ಲಿ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕೆಲಸಗಳನ್ನು ಮಾಡಬೇಕಾಗುತ್ತದೆ. ಗಿಡ ನೆಟ್ಟು ಪೋಷಿಸುವುದರಿಂದ ಶುದ್ಧ ಗಾಳಿ ಹಾಗೂ ಪ್ರಕೃತಿ ರಕ್ಷಿಸುವುದರಿಂದ ಮಳೆ, ಬೆಳೆ ಹಾಗೂ ಆರೋಗ್ಯ ಚೆನ್ನಾಗಿರುತ್ತದೆ ಮತ್ತು ದೇಶದ ಅಭಿವೃದ್ಧಿಯೂ ಸಾಧ್ಯವೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಅಭಿಪ್ರಾಯಟ್ಟರು.
ಮಾನವನ ಅಭಿವೃದ್ಧಿಗೆ ಪರಿಸರ ನಾಶ
ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಬಿಸಿದೆ ಎಂದರೆ ತಪ್ಪಾಗಲಾರದು. ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಆಸೆಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದರು.
ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ
ವಿಶ್ವ ಪರಿಸರ ದಿನದ ಪ್ರಯುಕ್ತ ಕೊಣನೂರಿನ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಭವನದಲ್ಲಿ ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ನೀಡಲಾಯಿತು. ಪರಿಸರವಿದ್ದರೆ ನಾವು. ಯಾರು ಪರಿಸರವನ್ನು ರಕ್ಷಿಸುತ್ತಾರೋ ಅವರನ್ನು ಪರಿಸರ ರಕ್ಷಿಸುತ್ತದೆ. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರತಿಯೊಬ್ಬ ನಾಗರಿಕನು ತಿಳಿದಾಗ ಪರಿಸರ ಜಾಗೃತಿ ಉಂಟಾಗುತ್ತದೆ. ಎಲ್ಲರಿಗೆ ಒಂದೊಂದು ಸಸಿಯನ್ನು ನೀಡಲಾಗುವುದು. ಇದನ್ನು ತಮ್ಮ ಮನೆಯ ಆವರಣದಲ್ಲಿ ನೆಟ್ಟು ಪರಿಸರವನ್ನು ಕಾಪಾಡಿ. ತಮ್ಮ ಪರಿಸರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಿ ಎಂದು ತಿಳಿಸಿದರು.
ನಾಗರಿಕರಲ್ಲಿ ಪರಿಸರ ಜಾಗೃತಿ ಬಹಳ ಅಗತ್ಯ
ಪರಿಸರ ದಿನವೆಂದರೆ ಕೇವಲ ಸಸಿ ನೆಟ್ಟು ಒಂದು ದಿನದ ಮಟ್ಟಿಗೆ ಆಚರಿಸುವ ಕಾರ್ಯಕ್ರಮವಲ್ಲ, ನಿರಂತರವಾಗಿ ಉತ್ತಮ ವಾತಾವರಣಕ್ಕಾಗಿ ಪರಿಸರವನ್ನು ನಾವು ಕಾಪಾಡಿಕೊಳ್ಳಬೇಕು ಇದು ಎಲ್ಲರ ಜವಾಬ್ದಾರಿ ಕೂಡ ಎಂದು ನಗರಸಭೆ ಆಯುಕ್ತ ಕೃಷ್ಣಮೂರ್ತಿ ಕರೆ ನೀಡಿದರು. ನಾಗರಿಕರು ಮತ್ತು ಎಲ್ಲರೂ ಸಹ ಜಾಗೃತಿ ವಹಿಸಬೇಕು ಹಾಗೂ ಪ್ಲಾಸ್ಟಿಕ್ ಬಳಸುವುದನ್ನು ಕಡ್ಡಾಯವಾಗಿ ನಿಲ್ಲಿಸಿ ಎಂದು ಅವರು ಮನವಿ ಮಾಡಿದರು.
ಪ್ರಕೃತಿಗೆ ವಿರುದ್ಧವಾದ ಯಾವುದೇ ಚಟುವಟಿಕೆ ಮಾಡಬಾರದು
ವೈಜ್ಞಾನಿಕ ಚಿಂತನೆಗಳು ಪ್ರಕತಿಗೆ ಪೂರಕವಾಗಿ ಬೆಳೆಯುವ ಬದಲು ಮಾರಕವಾಗಿ ಬೆಳೆಯುತ್ತಿರುವ ಕಾರಣ ಪರಿಸರ ಮಾಲಿನ್ಯಕ್ಕೆ ನಾವುಗಳೆಲ್ಲರೂ ಕಾರಣರಾಗುತ್ತೇವೆ ಎಂದು ಪ್ರಾಂಶುಪಾಲರಾದ ಪ್ರೊ. ಗೀತಾ ಎ. ತಿಳಿಸಿದರು. ಕರವೇ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್ ಮಾತನಾಡಿ, ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವಂತಹ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು. ಅನ್ಯಗ್ರಹಗಳ ಮೇಲೆ ಕಾಲಿಟ್ಟಿರುವ ಮನುಷ್ಯ ಭೂಮಿಯ ಮೇಲಿರುವ ನೀರು, ಗಾಳಿಯನ್ನು ಸ್ವಚ್ಛವಾಗಿರಿಸಿಕೊಳ್ಳಲು ಆಗದೆ ವಿಫಲನಾಗಿದ್ದಾನೆ ಇದು ದುರಂತವೇ ಸರಿ. ಪ್ರಕೃತಿಗೆ ವಿರುದ್ಧವಾದ ಯಾವುದೇ ಚಟುವಟಿಕೆಗಳನ್ನು ಮಾಡಬಾರದು ಎಂದು ಹೇಳಿದರು.
ಪರಿಸರ ನಾಶ ಮಾಡಿದರೆ ಮನುಕುಲದ ನಾಶ
ಪರಿಸರ ನಾಶ ಮಾಡಿದರೆ ಮುಂದೆ ಕ್ರಮೇಣ ಮನುಕುಲದ ನಾಶವಾಗಲಿದೆ ಎಂದು ಶ್ರವಣಬೆಳಗೊಳ ಜೈನ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು. ಮುಂದಿನ ಪೀಳಿಗೆಗೆ ಬದುಕಲು ಅತ್ಯವಶ್ಯಕವಾದ ಉತ್ತಮ ಗಾಳಿ, ನೀರು ದೊರೆಯಬೇಕಾದರೆ ಪರಿಸರ ರಕ್ಷಣೆ ಹಾಗೂ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಭೂಮಿಕ್‌ ಅಂತ್ಯಕ್ರಿಯೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಭೂಮಿಕ್‌ ಅಂತ್ಯಕ್ರಿಯೆ ಆತನ ಹುಟ್ಟೂರಾದ ತಾಲೂಕಿನ ಕುಪ್ಪಗೋಡಿನಲ್ಲಿ ಗುರುವಾರ ನಡೆಯಿತು.ಭೂಮಿಕ್ ಅವರ ತಂದೆ ಡಿ.ಟಿ.ಲಕ್ಷ್ಮಣ ತಾಲೂಕಿನ ಕುಪ್ಪುಗೋಡು ಗ್ರಾಮದವರಾಗಿದ್ದು, ಅವರಿಗೆ ಸೇರಿದ ಜಮೀನಿದೆ. ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ಭೂಮಿಕ್ ಕ್ರಿಕೆಟ್ ಬಗ್ಗೆಯೂ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದ. ಒಬ್ಬನೇ ಮಗನಾಗಿದ್ದರಿಂದ ಅತಿ ಹೆಚ್ಚು ಪ್ರೀತಿಯಿಂದ ಬೆಳೆಸಿ ಅವನ ಮುಂದಿನ ಜೀವನಕ್ಕೆ ಬೇಕಾಗುವ ಎಲ್ಲಾ ವ್ಯವಸ್ಥೆಗಳನ್ನು ತಂದೆ ಕಲ್ಪಿಸಿದ್ದರು.
ಸಾಹಿತ್ಯ ಕ್ರೀಡೆಗಳು ಮನುಷ್ಯನ ವ್ಯಕ್ತಿತ್ವವನ್ನು ಬದಲಾಯಿಸುತ್ತವೆ
ಹಾಸನ ಜಿಲ್ಲೆಯ ಹೆಸರನ್ನು ವಿಶ್ವ ಮಟ್ಟದಲ್ಲಿ ಬೆಳಗಿಸಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ನಮ್ಮ ನಡುವೆ ಇರುವುದು ನಮಗೊಂದು ಹೆಮ್ಮೆ. ಸಾಹಿತ್ಯ ಮತ್ತು ಕಲೆ, ಕ್ರೀಡೆಗಳು ಮನುಷ್ಯನ ವ್ಯಕ್ತಿತ್ವವನ್ನು ಬದಲಾಯಿಸುತ್ತವೆ. ವ್ಯಕ್ತಿಗೆ ಕೀರ್ತಿ ತರುವುದರ ಜೊತೆಗೆ ಸಮಾಜದಲ್ಲಿ ಉತ್ತಮ ಮನುಷ್ಯರಾಗಿ ಬದುಕಲು ಸಹಕಾರಿಯಾಗುತ್ತವೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved