ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಬಸ್ ಕಲ್ಪಿಸಲು ಕ್ರಮಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ಒದಗಿಸಲು ಹೆಚ್ಚುವರಿಯಾಗಿ ೧೦ ಬಸ್ಸುಗಳನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು. ಈ ಗ್ರಾಮ ಸೇರಿ ತಾಲೂಕಿನ ಹಲವು ಹಳ್ಳಿಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿ ಗ್ರಾಮಸ್ಥರು ಮನವಿ ಮಾಡಿದ್ದು, ಸಾರಿಗೆ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಬಸ್‌ಗಳು ಬಂದ ಬಳಿಕ ಚನ್ನರಾಯಪಟ್ಟಣ, ಹಿರೀಸಾವೆ, ಅರಕೆರೆ, ಸಬ್ಬನಹಳ್ಳಿ, ಆಯರಹಳ್ಳಿ, ಕಮರವಳ್ಳಿ ಮಾರ್ಗದ ಸಮೀಕ್ಷೆ ನಡೆಸಿ, ಬಸ್ ಸಂಚಾರ ಪ್ರಾರಂಭಿಸಲಾಗುವುದು. ಇದಕ್ಕೆ ೩ ತಿಂಗಳು ಕಾಲಾವಕಾಶ ಬೇಕು ಎಂದರು.