ಜಿಲ್ಲೆಯಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ ಆಚರಣೆಮಹಾತ್ಮ ಗಾಂಧೀಜಿ, ಬಾಲಗಂಗಾಧರ ತಿಲಕ್, ಲಾಲ್ ಬಹುದ್ದೂರ್ ಶಾಸ್ತ್ರಿ, ವೀರ ಸಾವರ್ಕರ್, ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರಬೋಸ್, ಸರೋಜಿನಿ ನಾಯ್ಡು, ಜವಾಹರ್ ಲಾಲ್ ನೆಹರೂ ಸೇರಿದಂತೆ ನೂರಾರು ನೇತಾರರ ನೇತೃತ್ವದಲ್ಲಿ ಲಕ್ಷಾಂತರ ಚಳವಳಿಗಾರರು ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ನಂತರ ಹರಿದು ಹಂಚಿ ಹೋಗಿದ್ದ ಭಾರತವನ್ನು ಭಾಷಾವಾರು ಪ್ರಾಂತ್ಯಗಳನ್ನಾಗಿ ವಿಂಗಡಿಸಿ ಒಗ್ಗೂಡಿಸಿದ ಕೀರ್ತಿ ಸರ್ದಾರ್ ವಲ್ಲಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು.