ಮಕ್ಕಳ ರಕ್ಷಣಾ ಸಿಬ್ಬಂದಿಯ ಬೇಡಿಕೆಗಳ ಈಡೇರಿಕೆಗೆ ಆಗ್ರಹಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಖಾಯಂಮೇತರ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕಾಂತರಾಜು ಮಾತನಾಡಿ, ಮಕ್ಕಳ ಸಂರಕ್ಷಣೆ ಸಂವಿಧಾನಬದ್ಧ ಜವಾಬ್ದಾರಿಯಾಗಿದ್ದು ಸಮಾಜದಲ್ಲಿ ನಿರ್ಲಕ್ಷ್ಯ, ಶೋಷಣೆ, ದೌರ್ಜನ್ಯಗಳಿಗೆ ಒಳಗಾಗಿ ಹಕ್ಕು ಮತ್ತು ಅವಕಾಶಗಳಿಂದ ವಂಚಿತರಾದ ಮಕ್ಕಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಬಾಲನ್ಯಾಯ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಅಡಿಯಲ್ಲಿ ಅಸಹಾಯಕ, ಪಾಲನೆ, ಪೋಷಣೆ ಮತ್ತು ರಕ್ಷಣೆಯ ಅವಶ್ಯಕತೆ ಇರುವ ಮಕ್ಕಳು ಹಾಗೂ ಕಾನೂನಿನೊಡನೆ ಸಂಘರ್ಷದಲ್ಲಿರುವ ಮಕ್ಕಳಿಗೆ ರಕ್ಷಣೆ ಹಾಗೂ ಪುನರ್ವಸತಿ ಒದಗಿಸಲಾಗುತ್ತಿದೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ದೃಷ್ಠಿಯಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ.