ಧರ್ಮದರ್ಶನದ ಕ್ಯೂನಲ್ಲಿ ಸಾಗಲು ಮಾನಸಿಕವಾಗಿ ಸಿದ್ಧರಾಗಿಉಸ್ತುವಾರಿ ಸಚಿವರು ಧರ್ಮದರ್ಶನ ಸಾಲಿನಲ್ಲಿ ಸಾಗುತ್ತಿದ್ದ ಜನರನ್ನು ಮಂಗಳವಾರ ಮಾತನಾಡಿಸಿ ವ್ಯವಸ್ಥೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, "ಇಂದು ಐದನೇ ದಿನ. ಶುಕ್ರವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆ ೫ ಗಂಟೆಯವರೆಗೆ ೬,೪೦,೭೦೦ ಭಕ್ತಾದಿಗಳು ದೇವಿ ದರ್ಶನ ಪಡೆದಿದ್ದಾರೆ. ಇಂದು ಬೆಳಿಗ್ಗೆಯಿಂದ ಇಲ್ಲಿಯವರೆಗೆ ೧,೨೨,೬೦೦ ಭಕ್ತರು ದರ್ಶನ ಪಡೆದಿದ್ದಾರೆ. ಐದೂವರೆ ಕಿಲೋಮೀಟರ್ ಬ್ಯಾರಿಕೇಡ್ ವ್ಯವಸ್ಥೆ ಮಾಡಿಲಾಗಿತ್ತು. ಮಾರನೇ ದಿನ ಒಂದು ಕಿಲೋ ಮೀಟರ್, ಮೂರನೇ ದಿನ ಮತ್ತೊಂದು ಕಿಲೋಮೀಟರ್ ಜಾಸ್ತಿ ಮಾಡಲಾಗಿದೆ. ಒಟ್ಟು ಏಳೂವರೆ ಕಿಲೋಮೀಟರ್ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ " ಎಂದರು.