ಶಿಕ್ಷಣದೊಂದಿಗೆ ಸಾಮಾನ್ಯ ಜ್ಞಾನವೂ ಅಗತ್ಯಮಕ್ಕಳಿಗೆ ಆಸ್ತಿ ಮಾಡಬೇಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ದೇಶದ ಆಸ್ತಿಯನ್ನಾಗಿ ಮಾಡಿ. ಒಳ್ಳೆಯ ವಾತಾವರಣ ಇರುವ ಶಾಲೆ, ಪ್ರೋತ್ಸಾಹ ನೀಡುವ ಪೋಷಕರು, ವೃತ್ತಿಯಲ್ಲಿ ಆಸಕ್ತಿ ಹೊಂದಿರುವ ಶಿಕ್ಷಕರು ಒಂದೆಡೆ ಸೇರಿದರೆ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು. ಅವರು ನಗರದ ಕನ್ನಿಕಾ ಆಂಗ್ಲ ಮಾಧ್ಯಮ ಶಾಲಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.