ಕಸಬಾ ಕೃಷಿ ಸೊಸೈಟಿ ಅಧ್ಯಕ್ಷರಾಗಿ ಜಿ.ಕೆ.ಮಧು ಅವಿರೋಧ ಆಯ್ಕೆನೂತನ ಅಧ್ಯಕ್ಷ ಜಿ.ಕೆ.ಮಧು ಮಾತನಾಡಿ, ಕಸಬಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಹಿಂದೆ ಅಧ್ಯಕ್ಷರಾಗಿದ್ದವರೆಲ್ಲ ಸಂಘವನ್ನು ಅಭಿವೃದ್ಧಿಯತ್ತ ಮುನ್ನಡೆಸಿದ್ದಾರೆ. ಅವರೆಲ್ಲರ ಮಾರ್ಗದರ್ಶನ, ಸಲಹೆಯನ್ನು ಪಡೆದು ಸಂಘವನ್ನು ನಡೆಸಿಕೊಂಡು ಹೋಗುವುದರ ಜೊತೆಗೆ ನಮ್ಮ ನಾಯಕರಾದ ತಾಲೂಕಿನ ನೀರಾವರಿ ಹರಿಕಾರ, ಭಗೀರಥ ಬಾಲಕೃಷ್ಣರವರಿಂದ ಹೆಚ್ಚಿನ ಅನುದಾನ ತಂದು ರೈತರಿಗೆ ಮತ್ತಷ್ಟು ಸಾಲ ನೀಡುವ ಮೂಲಕ ಅವರ ಆರ್ಥಿಕತೆಯನ್ನು ಬಲಗೊಳಿಸಲಾಗುವುದು ಎಂದರು.