ದೇಶದ ಅಭಿವೃದ್ಧಿಯಲ್ಲಿ ರಸ್ತೆಗಳು ಪ್ರಮುಖ ಪಾತ್ರ ವಹಿಸುತ್ತವೆರಸ್ತೆ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಶನಿವಾರ ಭೂಮಿಪೂಜೆ ನೆರವೇರಿಸಿದರು. ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಗುಣಮಟ್ಟದಿಂದ ಮಾಡಿಕೊಡುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿ ಎಂದು ಲೋಕೋಪಯೋಗಿ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು. ನಗರಗಳಿರಲಿ, ಗ್ರಾಮೀಣ ಪ್ರದೇಶಗಳಿರಲಿ ಎಲ್ಲ ಭಾಗಗಳ ಅಭಿವೃದ್ಧಿ ಆಗಬೇಕು ಎಂದರೆ ರಸ್ತೆಗಳು ಪ್ರಮುಖ ಪಾತ್ರ ವಹಿಸುತ್ತವೆ. ರಸ್ತೆಗಳು ಚೆನ್ನಾಗಿದ್ದರೆ, ಸಾಗಣೆ, ವ್ಯಾಪಾರ-ವಹಿವಾಟು ಒಂದು ಕಡೆಯಿಂದ ಮತ್ತೊಂದು ಕಡೆಗೆ ಚೆನ್ನಾಗಿ ನಡೆಯಲಿದೆ. ಇದರಿಂದ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಹೇಳಿದರು.