ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ನೌಕರರ ಉಡಾಫೆ ವರ್ತನೆಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ನಿರ್ವಹಣೆ ಗುತ್ತಿಗೆಯನ್ನು ಖಾಸಗಿ ಏಜೆನ್ಸಿಗಳಿಗೆ ನೀಡುತ್ತಿದ್ದು, ಡಿ ಗ್ರೂಪ್ ನೌಕರರು ಸಮರ್ಪಕವಾಗಿ ತಮ್ಮ ಕರ್ತವ್ಯ ನಿರ್ವಹಿಸದೆ ತಾಲೂಕು ವೈದ್ಯಾಧಿಕಾರಿಗಳ ಮೇಲೆ ಉಡಾಫೆ ವರ್ತನೆ ತೋರುತ್ತಿದ್ದು, ಈ ಬಗ್ಗೆ ಜಿಲ್ಲಾ ಆರೋಗ್ಯಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದು ಶಾಸಕ ಎಚ್ ಕೆ ಸುರೇಶ್ ಹೇಳಿದರು. ಈ ಬಗ್ಗೆ ಜಿಲ್ಲೆಯ ಗುತ್ತಿಗೆದಾರನನ್ನು ಕೇಳಲು ಹೋದರೆ ಅವರು ಸಿಗುತ್ತಿಲ್ಲ. ಹೊರಗಿನವರಿಗೆ ಗುತ್ತಿಗೆ ನೀಡುತ್ತಿರುವುದರಿಂದ ಡಿ ಗ್ರೂಪ್ ನೌಕರರು ತಮ್ಮ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದು, ಸ್ವಚ್ಛತೆಯಲ್ಲಿ ಹಿಂದುಳಿಯಲು ಕಾರಣವಾಗಿದೆ ಎಂದರು.