ನಾಳೆ ಹಾಸನ ಅಭ್ಯರ್ಥಿ ಶ್ರೇಯಸ್ ಪಟೇಲ್ ಪ್ರಚಾರ

| Published : Mar 23 2024, 01:04 AM IST

ನಾಳೆ ಹಾಸನ ಅಭ್ಯರ್ಥಿ ಶ್ರೇಯಸ್ ಪಟೇಲ್ ಪ್ರಚಾರ
Share this Article
  • FB
  • TW
  • Linkdin
  • Email

ಸಾರಾಂಶ

ಇದೆ 24 ರಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಕಡೂರು ಕ್ಷೇತ್ರಕ್ಕೆ ಆಗಮಿಸಿ ಪಟ್ಟಣದಲ್ಲಿ ನಡೆಯುವ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು ಎಂದು ಕಡೂರು- ಬೀರೂರು ಬ್ಲಾಕ್ ಕಾಂಗ್ರೆಸ್ ಘಟಕಗಳ ಅಧ್ಯಕ್ಷರಾದ ಚಂದ್ರಮೌಳಿ ಹಾಗೂ ಕಲ್ಲೇಶ್ ತಿಳಿಸಿದರು.

ಕಡೂರು- ಬೀರೂರು ಬ್ಲಾಕ್ ಕಾಂಗ್ರೆಸ್ ಘಟಕದ ಚಂದ್ರಮೌಳಿ, ಕಲ್ಲೇಶ್ ಮಾಹಿತಿ

ಕನ್ನಡ ಪ್ರಭ ವಾರ್ತೆ, ಕಡೂರು

ಇದೆ 24 ರಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಕಡೂರು ಕ್ಷೇತ್ರಕ್ಕೆ ಆಗಮಿಸಿ ಪಟ್ಟಣದಲ್ಲಿ ನಡೆಯುವ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು ಎಂದು ಕಡೂರು- ಬೀರೂರು ಬ್ಲಾಕ್ ಕಾಂಗ್ರೆಸ್ ಘಟಕಗಳ ಅಧ್ಯಕ್ಷರಾದ ಚಂದ್ರಮೌಳಿ ಹಾಗೂ ಕಲ್ಲೇಶ್ ತಿಳಿಸಿದರು.ಪಟ್ಟಣದ ಕಡೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಕಾಂಗ್ರೆಸ್ ಪಕ್ಷದ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಹಾಸನದ ಶ್ರೇಯಸ್ ಪಟೇಲ್ ಕಡೂರು ಕ್ಷೇತ್ರಕ್ಕೆ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಮಾ.24ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಕಡೂರು ಪಟ್ಟಣ ಸಮೀಪದ ಬೆಂಕಿ ಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ಕಾಂಗ್ರಸ್ ಕಾರ್ಯಕರ್ತರ ಸಭೆ ನಡೆಯಲಿದೆ.

ಸದರಿ ಸಭೆಯಲ್ಲಿ ಹಾಸನದ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಲಕ್ಷ್ಮಣ್, ಹಾಸನದ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಕೆ.ಎನ್. ರಾಜಣ್ಣ, ಚಿಕ್ಕಮಗಳೂರು ಜಿಲ್ಲೆ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್ ಸೇರಿದಂತೆ ಅನೇಕ ಪದಾಧಿಕಾರಿಗಳು ಚುನಾವಣಾ ಪ್ರಚಾರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ ಎಂದರು.

ಕಡೂರು ಶಾಸಕ ಕೆ ಎಸ್ ಆನಂದ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಪದಾಧಿಕಾರಿಗಳು, ಚಿಕ್ಕಮಗಳೂರು ಜಿಲ್ಲೆ ಪಕ್ಷದ ಅನೇಕ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿ ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಸಭೆ ಯಶಸ್ವಿಗೊಳಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಕಡೂರು- ಬೀರೂರು ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಅಭಿದ್ ಪಾಶಾ, ವಿನಯ್, ಶಿವೇಗೌಡ,ಶ್ರೀನಿವಾಸ್ ನಾಯ್ಕ, ಯಶ್ವಂತ್ ಸೇರಿದಂತೆ ಮತ್ತಿತರರು ಹಾಜರಿದ್ದರು.

22 ಕೆಕೆಡಿಯು2

ಕಡೂರು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸುದ್ದಿಗೋಷ್ಟಿ ನಡೆಸಿದರು.