ಸಾರಾಂಶ
ಪ್ರಸ್ತುತದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳು ಸೇರಿದಂತೆ ಇನ್ನಿತರೆ ಯಾವುದಕ್ಕೂ ಮರುಳಾಗದೇ ಓದುವ ಕಡೆ ಹೆಚ್ಚಿನ ಗಮನ ಕೊಟ್ಟರೇ ಮುಂದೆ ಉತ್ತಮ ಭವಿಷ್ಯ ನಿಮ್ಮದಾಗುತ್ತದೆ. ನಿಮ್ಮ ಭವಿಷ್ಯ ನಿಮ್ಮ ಕೈಲೆ ಇದೆ ಎಂದು ಹಾಸನ ವಿವಿ ಕುಲಪತಿ ತಾರಾನಾಥ್ ತಿಳಿಸಿದರು. ಹಾಸನ ಡಿವೈಎಸ್ಪಿ ಮುರಳೀಧರ್ ಮಾತನಾಡಿ, ಇಂದಿನ ಅನೇಕ ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗುತ್ತಾರೆ. ದುಶ್ಚಟಗಳಿಂದ ದೂರವಿರಬೇಕೆಂದು ಕಿವಿಮಾತು ಹೇಳಿದರು.
ಕನ್ನಡಪ್ರಭ ವಾರ್ತೆ ಹಾಸನ
ಪ್ರಸ್ತುತದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳು ಸೇರಿದಂತೆ ಇನ್ನಿತರೆ ಯಾವುದಕ್ಕೂ ಮರುಳಾಗದೇ ಓದುವ ಕಡೆ ಹೆಚ್ಚಿನ ಗಮನ ಕೊಟ್ಟರೇ ಮುಂದೆ ಉತ್ತಮ ಭವಿಷ್ಯ ನಿಮ್ಮದಾಗುತ್ತದೆ. ನಿಮ್ಮ ಭವಿಷ್ಯ ನಿಮ್ಮ ಕೈಲೆ ಇದೆ ಎಂದು ಹಾಸನ ವಿವಿ ಕುಲಪತಿ ತಾರಾನಾಥ್ ತಿಳಿಸಿದರು.ನಗರದ ಖಾಸಗಿ ಹೋಟೆಲೊಂದರಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೈಡ್ ವಿದ್ಯಾಸಂಸ್ಥೆಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮ ಜೀವನ ಮತ್ತು ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಹಾಸನ ಡಿವೈಎಸ್ಪಿ ಮುರಳೀಧರ್ ಮಾತನಾಡಿ, ಇಂದಿನ ಅನೇಕ ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗುತ್ತಾರೆ. ದುಶ್ಚಟಗಳಿಂದ ದೂರವಿರಬೇಕೆಂದು ಕಿವಿಮಾತು ಹೇಳಿದರು.ಕಾಲೇಜು ಪ್ರಾಂಶುಪಾಲರಾದ ಎ.ಎಲ್. ನವೀನ್ ಕುಮಾರ್ ಮಾತನಾಡಿ, ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಗಮನ ಮತ್ತು ಸಮಾಜಕ್ಕೆ ಒಬ್ಬ ಉತ್ತಮ ಪ್ರಜೆಯನ್ನಾಗಿ ನಿರ್ಮಾಣ ಮಾಡುವುದು ನಮ್ಮ ಸಂಸ್ಥೆಯ ಜವಾಬ್ದಾರಿ ಎಂದು ತಿಳಿಸಿದರು.ಇದೇ ವೇಳೆ ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯರಾದ ವಕೀಲರಾದ ನರೇಶ್, ಕಾಂತರಾಜ್, ನಂದೀಶ್ ನಿತಿನ್, ಶಶಿಕುಮಾರ್, ರಘು ರೂಪೇಶ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.