ಸಾರಾಂಶ
ವಾರಾಂತ್ಯದ ಹಿನ್ನೆಲೆಯಲ್ಲಿ ಹಾಸನದ ಹಾಸನಾಂಬಾ ದರ್ಶನಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ಶುಕ್ರವಾರ ಒಂದೇ ದಿನ 70 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದರು.
ಕನ್ನಡಪ್ರಭ ವಾರ್ತೆ ಹಾಸನವಾರಾಂತ್ಯದ ಹಿನ್ನೆಲೆಯಲ್ಲಿ ಹಾಸನದ ಹಾಸನಾಂಬಾ ದರ್ಶನಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ಶುಕ್ರವಾರ ಒಂದೇ ದಿನ 70 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದರು.
ಶುಕ್ರವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಶುಕ್ರವಾರ ಒಂದೇ ದಿನ 70 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದರು.ಈ ಮಧ್ಯೆ, ಶನಿವಾರದಿಂದ ಅಕ್ಟೋಬರ್22ರ ವರೆಗೆ ದಿನದ 24 ಗಂಟೆ ಹಾಸನಾಂಬಾ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಪ್ರತಿ ದಿನ ಮಧ್ಯಾಹ್ನ ಹಾಗೂ ರಾತ್ರಿ ನೈವೇದ್ಯದ ಕೆಲ ಗಂಟೆ ಹೊರತುಪಡಿಸಿ ಉಳಿದ ಅವಧಿಯಲ್ಲಿ ದರ್ಶನಕ್ಕೆ ಅವಕಾಶವಿದೆ. ವಿಐಪಿ, ವಿವಿಐಪಿ ಪಾಸ್ ರದ್ದು ಮಾಡಿದ ಹಿನ್ನೆಲೆಯಲ್ಲಿ ಸಾಮಾನ್ಯ ಭಕ್ತರ ದರ್ಶನಕ್ಕೆ ಹೆಚ್ಚಿನ ಆದ್ಯತೆ ಸಿಗುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ.
ಈ ಮಧ್ಯೆ, ಗೋಲ್ಡ್ ಕಾರ್ಡ್ ಹಾಗೂ ಗಣ್ಯರ ಖೋಟಾದಡಿ ಬರುವವರಿಗಾಗಿ ಸಮಯ ನಿಗದಿಪಡಿಸಲಾಗಿದ್ದು, ಬೆಳಗ್ಗೆ 7 ರಿಂದ 10ಗಂಟೆವರೆಗೆ ಗೋಲ್ಡ್ ಕಾರ್ಡ್ ಪಡೆದವರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12-30 ರವರೆಗೆ ಶಿಷ್ಟಾಚಾರದ ಗಣ್ಯರಿಗೆ ದರ್ಶನಕ್ಕೆ ಅವಕಾಶವಿದೆ. ಉಳಿದ ಸಂಪೂರ್ಣ ಅವಧಿಯಲ್ಲಿ ಸಾಮಾನ್ಯ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.