ದುಬೈ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಕಿರಣ್ ಗೌಡ ಅವಿರೋಧ ಆಯ್ಕೆ

| Published : Feb 16 2024, 01:47 AM IST

ದುಬೈ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಕಿರಣ್ ಗೌಡ ಅವಿರೋಧ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಲ್ಯ ಗ್ರಾಮದ ನಿವಾಸಿಯಾದ ಅಮರನಾಥ್ ಸಿ.ಬಿ. ಹಾಗೂ ನಾಗಮ್ಮ ಅವರ ಮಗನಾದ ಕಿರಣ್ ಗೌಡ ಅವರು ದುಬೈ (ಯುಎಇ) ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಅಭಿನಂದನೆ । ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶಂಭುನಾಥ ಸ್ವಾಮೀಜಿ, ಹಲವರ ಶ್ಲಾಘನೆಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಲ್ಯ ಗ್ರಾಮದ ನಿವಾಸಿಯಾದ ಅಮರನಾಥ್ ಸಿ.ಬಿ. ಹಾಗೂ ನಾಗಮ್ಮ ಅವರ ಮಗನಾದ ಕಿರಣ್ ಗೌಡ ಅವರು ದುಬೈ (ಯುಎಇ) ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಇವರು ಸುಮಾರು ೧೫ ವರ್ಷದಿಂದ ದುಬೈನಲ್ಲಿ ನೆಲೆಸಿದ್ದು ಇವರು ಹೋಟೆಲ್ ಹಾಗೂ ಮೆಡಿಕಲ್‌ ಸೆಂಟರ್‌ ನಡೆಸುತ್ತ ಹಲವಾರು ಸಮಾಜಮುಖಿ ಕೆಲಸವನ್ನು ಮಾಡುತ್ತಿದ್ದು ಸಂಘ ಸಂಸ್ಥೆಗಳ ಕಾರ್ಯದಲ್ಲಿ ಕಾರ್ಯನಿರತರಾಗಿದ್ದಾರೆ. ಕಳೆದ ವರ್ಷ ಒಕ್ಕಲಿಗ ಸಂಘದ ವತಿಯಿಂದ ಹಲವಾರು ಕಾರ್ಯಕ್ರಮಗಳು ನಡೆದಿದ್ದು ಅದರಲ್ಲಿ ಕೆಂಪೇಗೌಡ ಉತ್ಸವವನ್ನು ಅದ್ಧೂರಿಯಾಗಿ ನಡೆಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮುಖ್ಯ ಅತಿಥಿಗಳಾಗಿ ಹಾಗೂ ಇನ್ನಿತರ ಗಣ್ಯರು ಭಾಗವಹಿಸಿದ್ದರು.

ಇವರ ಆಯ್ಕೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಮತ್ತು ಕೊಡಗು ಜಿಲ್ಲೆಯ ಶಾಖಾ ಮಠದ ಕಾರ್ಯದರ್ಶಿ ಶಂಭುನಾಥ ಸ್ವಾಮೀಜಿ ಮತ್ತು ಹಾಸನ ಶಾಸಕ ಸ್ವರೂಪ್, ಹಾಸನ ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಲ್ಲೇಶ್‌ಗೌಡ, ಮಾಜಿ ಅಧ್ಯಕ್ಷ ಮದನ್‌ಗೌಡ, ವಿಜಯ ವಿದ್ಯಾಸಂಸ್ಥೆಯ ಮುಖ್ಯಸ್ಥ ತಾರಾ ಎಸ್.ಸ್ವಾಮಿ, ಶ್ರೀ ರಂಗ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಾ. ಎಚ್.ಎಸ್. ಅನಿಲ್‌ಕುಮಾರ್, ಹಾಸನ ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟದ ಅಧ್ಯಕ್ಷರು ಹಾಗೂ ಕುವೆಂಪು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಈ. ಶಿವರಾಮೇಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಬೊಮ್ಮೇಗೌಡ ಹಾಗೂ ಇನ್ನಿತರ ಅನೇಕರು ಇವರನ್ನು ಅಭಿನಂದಿಸಿದ್ದಾರೆ.ದುಬೈನಲ್ಲಿರುವ ಒಕ್ಕಲಿಗರ ಸಮಘದ ಅಧ್ಯಕ್ಷರಾಗಿ ಆಯ್ಕೆಯಾದ ಕಿರಣ್‌ ಗೌಡ.